ನವದಿಲ್ಲಿ : ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬುಧವಾರ (ಇಂದು) ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.
ಅಂತರಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಇಳಿಕೆಯಾದ ಬೆನ್ನಲೇ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 60 ಪೈಸೆ ಹಾಗೂ ಪ್ರತಿ ಲೀಟರ್ ಡಿಸೇಲ್ ಬೆಲೆಯಲ್ಲಿ 56 ಪೈಸೆ ಇಳಿಕೆ ಮಾಡಲಾಗಿದೆ. ಆದಕಾರಣ ದೆಹಲಿಯಲ್ಲಿ ಇಂದು ಲೀಟರ್ ಪೆಟ್ರೋಲ್ ಬೆಲೆ 77.83ಕ್ಕೆ ಹಾಗೇ ಡಿಸೇಲ್ ಬೆಲೆ ಪ್ರತಿ ಲೀಟರ್ ಗೆ 68.75 ರೂಪಾಯಿಯಾಗಿದೆ.
ಸ್ಥಳೀಯ ತೆರಿಗೆ ಅಥವಾ ವ್ಯಾಟ್ ಆಧಾರದ ಮೇಲೆ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸವಿದೆ. ಮಹಾನಗರಗಳ ಪೈಕಿ ದೆಹಲಿ ಅತಿ ಕಡಿಮೆ ತೈಲ ದರವನ್ನು ಹೊಂದಿದೆ. ಮುಂಬೈನಲ್ಲಿ ಪ್ರಸ್ತುತ ಪ್ರತಿ ಲೀಟರ್ ಪೆಟ್ರೋಲ್ ದರ ರೂ.85.65 ಹಾಗೂ ಡೀಸೆಲ್ ದರ ರೂ.73.20 ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ