Webdunia - Bharat's app for daily news and videos

Install App

ಫಾರೆಕ್ಸ್: ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ ಚೇತರಿಕೆ

Webdunia
ಬುಧವಾರ, 1 ಜೂನ್ 2016 (15:53 IST)
ಮುಂಬೈ: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್ ಮಾರಾಟಕ್ಕೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 5 ಪೈಸೆ ಚೇತರಿಕೆ ಕಂಡು 67.21 ರೂಪಾಯಿ ಮೌಲ್ಯಕ್ಕೆ ತಲುಪಿದೆ.
 
ದೇಶದ ಆರ್ಥಿಕತೆ ಅಭಿವೃದ್ಧಿ ದರ ಚೇತರಿಕೆ ಕಂಡಿರುವ ಹಿನ್ನೆಲೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ ಕಂಡಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
 
ಕಳೆದ ಐದು ವರ್ಷಗಳಲ್ಲಿ ಭಾರತದ ಜಿಡಿಪಿ ದರ 7.6 ರಷ್ಟು ಅಭಿವೃದ್ಧಿಯಾಗಿದ್ದು, 2015-16 ರ ಆರ್ಥಿಕ ವರ್ಷದ ಜನವರಿ-ಮಾರ್ಚ್ ಅವಧಿಯಲ್ಲಿ ಜಿಡಿಪಿ ದರ 7.9 ಕ್ಕೆ ಏರಿಕೆಯಾಗಿದೆ
 
ದೇಶದ ಆರ್ಥಿಕ ಅಭಿವೃದ್ಧಿ ದರ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರಿಗೆ ರೂಪಾಯಿ ಮೌಲ್ಯ ಚೇತರಿಕೆ ಕಂಡಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
 
ಮಂಗಳವಾರದ ವಹಿವಾಟಿನ ಮುಕ್ತಾಯಕ್ಕೆ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಬ್ಯಾಂಕುಗಳು ಮತ್ತು ರಫ್ತು ವಹಿವಾಟುದಾರರು ಡಾಲರ್‌ಗಳ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದರಿಂದ ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 10 ಪೈಸೆ ಕುಸಿತ ಕಂಡು 67.26 ರೂಪಾಯಿ ತಲುಪಿತ್ತು. 
 
ಏತನ್ಮಧ್ಯೆ ಶೇರುಪೇಟೆಯ ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಸಂವೇದಿ ಸೂಚ್ಯಂಕ 62.19 ಪಾಯಿಂಟ್‌ಗಳಷ್ಟು ಏರಿಕೆ ಕಂಡು 26,730.15 ಅಂಕಗಳಿಗೆ ತಲುಪಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments