ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೋ ದರ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲದ ಮೇಲಿನ ಬಡ್ಡಿದರವನ್ನು ಕಡಿತಗೊಳಿಸುವುದರ ಮೂಲಕ ಗ್ರಾಹಕರಿಗೆ ಸಿಹಿಸುದ್ಧಿ ನೀಡಿದೆ.
ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿತ್ತು. ಆದಕಾರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ 30 ಲಕ್ಷದವರೆಗಿನ ಗೃಹ ಸಾಲದ ಮೇಲೆ ವಿಧಿಸುವ ಬಡ್ಡಿದರವನ್ನು ಶೇ. 0.05ರಷ್ಟು ಕಡಿತಗೊಳಿಸಿದೆ.
ಎಸ್ಬಿಐ ಬ್ಯಾಂಕ್ ಸಾಲ ಮಾರುಕಟ್ಟೆ ವಿಭಾಗದಲ್ಲಿ ಹೆಚ್ಚಿನ ಮಾರುಕಟ್ಟೆ ಪಾಲನ್ನು ಹೊಂದಿದೆ. ಆರ್ಬಿಐ ರೆಪೊ ದರ ಕಡಿತಗೊಳಿಸಿರುವುದರಿಂದ ಕೆಳ ಮತ್ತು ಮಧ್ಯಮ ವರ್ಗದ ಗ್ರಾಹಕರಿಗೆ ಇದರ ಪ್ರಯೋಜನ ವರ್ಗಾಯಿಸುವುದು ಮುಖ್ಯ ಎಂದು ಎಸ್ಬಿಐ ಮುಖ್ಯಸ್ಥ ರಜನೀಶ್ ಕುಮಾರ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ