ಇಂಟರ್ ನೆಟ್ ಬ್ಯಾಂಕಿಂಗ್ ಬಳಕೆದಾರರ ಖಾತೆಗೆ ಮೊಬೈಲ್ ನಂಬರ್ ಕಡ್ಡಾಯಗೊಳಿಸಿದ ಸ್ಟೇಟ್ ಬ್ಯಾಂಕ್

ಶನಿವಾರ, 13 ಅಕ್ಟೋಬರ್ 2018 (15:22 IST)
ಬೆಂಗಳೂರು : ಸ್ಟೇಟ್ ಬ್ಯಾಂಕ್ ತನ್ನ ಇಂಟರ್ನೆಟ್ ಬ್ಯಾಂಕಿಂಗ್ ಬಳಕೆದಾರರಿಗೆ  ಬ್ಯಾಂಕ್ ಖಾತೆಗೆ  ಕಡ್ಡಾಯವಾಗಿ ಮೊಬೈಲ್ ನಂಬರ್ ರಿಜಿಸ್ಟರ್ ಮಾಡಬೇಕು ಎಂಬುದಾಗಿ ತಿಳಿಸಿದೆ.


ಈ ಕುರಿತ ಮಾಹಿತಿಯನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಇಂಟರ್ನೆಟ್ ಬ್ಯಾಂಕಿಂಗ್ ವೆಬ್ ಸೈಟ್ onlinesbi ನಲ್ಲಿ ಪ್ರಕಟಿಸಿದ್ದು 2018ರ ಡಿಸೆಂಬರ್ 1 ರೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ರಿಜಿಸ್ಟರ್ ಮಾಡದಿದ್ದರೆ ಇಂಟರ್ ನೆಟ್ ಬ್ಯಾಂಕಿಂಗ್ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ ಎಂಬುದಾಗಿ  ತಿಳಿಸಿದೆ.


ಹೀಗಾಗಿ ಗ್ರಾಹಕರು ತಕ್ಷಣ  ಸಮೀಪದ ಬ್ಯಾಂಕ್ ಗೆ  ತೆರಳಿ ತಮ್ಮ ಮೊಬೈಲ್ ನಂಬರ್ ನ್ನು ಬ್ಯಾಂಕ್ ಖಾತೆಗೆ ರಿಜಿಸ್ಟರ್ ಮಾಡಬೇಕೆಂದು ಪ್ರಕಟಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಕದಿದ್ರೆ ಬಿಜೆಪಿಗೆ ಲಾಭ!