Webdunia - Bharat's app for daily news and videos

Install App

ತೆರಿಗೆ ಸಂಗ್ರಹದಲ್ಲಿ ರಾಜ್ಯ ನಂ.1

Webdunia
ಮಂಗಳವಾರ, 19 ಸೆಪ್ಟಂಬರ್ 2023 (19:00 IST)
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಾಣಿಜ್ಯ ತೆರಿಗೆ ಸಂಗ್ರಹದ ಬೆಳವಣಿಗೆ ದರ ಶೇ.19.2ರಷ್ಟಿದ್ದು, ಈ ಬೆಳವಣಿಗೆ ದರ ಇಡೀ ದೇಶದಲ್ಲಿಯೇ ಅತಿ ಹೆಚ್ಚು. ಆ ಮೂಲಕ, ಸರಕು ಮತ್ತು ಸೇವಾ ತೆರಿಗೆ ಮತ್ತು ಮಾರಾಟ ತೆರಿಗೆ ಸಂಗ್ರಹದ ಸಾಧನೆಯಲ್ಲಿ ಕರ್ನಾಟಕವು ದೇಶಕ್ಕೆ ನಂಬರ್ ಒನ್‌ ಎನಿಸಿಕೊಂಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ಗುರುವಾರ ನಡೆಸಿದ ಮುಖ್ಯಮಂತ್ರಿ, ರಾಜ್ಯದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ 9.4ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಅವರಿಗೆ ವಿವರಿಸಿದರು ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ 15ರಷ್ಟು ಮಾತ್ರ ಇದೆ. ಅದಕ್ಕೆ ಹೋಲಿಸಿದರೆ ತೆರಿಗೆ ಸಂಗ್ರಹ ವಿಚಾರದಲ್ಲಿ ಗಮನಾರ್ಹ ಸಾಧನೆ ಆಗಿದೆ. ಹಾಗೆಂದು, ಇಷ್ಟಕ್ಕೆ ಸಮಾಧಾನಪಟ್ಟುಕೊಳ್ಳದೆ ತೆರಿಗೆ ವಂಚನೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಅದನ್ನು ಸಾಧಿಸಿ ತೋರಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಕಿವಿಮಾತು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments