Select Your Language

Notifications

webdunia
webdunia
webdunia
webdunia

Union Budget 2025: ಆದಾಯ ತೆರಿಗೆ ಮಿತಿ ಏರಿಸಿದ ನಿರ್ಮಲಾ ಸೀತಾರಾಮನ್, ಇಲ್ಲಿದೆ ಹೊಸ ಲೆಕ್ಕಾಚಾರ

Income Tax

Krishnaveni K

ನವದೆಹಲಿ , ಶನಿವಾರ, 1 ಫೆಬ್ರವರಿ 2025 (12:39 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ 2025 ರಲ್ಲಿ ನಿರೀಕ್ಷೆಯಂತೇ ಆದಾಯ ತೆರಿಗೆ ಮಿತಿ ಹೆಚ್ಚಳ ಮಾಡಲಾಗಿದೆ. ಇದರ ಬಗ್ಗೆ ಇಲ್ಲಿದೆ ವಿವರ.

ಆದಾಯ ತೆರಿಗೆ ಮಿತಿಯನ್ನು ಈ ಬಜೆಟ್ ನಲ್ಲಿ 10 ಲಕ್ಷ ರೂ.ವರೆಗೆ ಏರಿಕೆ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ನಿರೀಕ್ಷೆಗೂ ಮೀರಿ ಆದಾಯ ಮಿತಿ ಏರಿಕೆ ಮಾಡಲಾಗಿದೆ. 12 ಲಕ್ಷ ರೂ.ಗಳವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.

ಇದು ಮಧ್ಯಮ ವರ್ಗದ ಜನರಿಗೆ ಕೊಂಚ ರಿಲೀಫ್ ಸಿಗಲಿದೆ. 0-4 ಲಕ್ಷ ರೂ.ವರೆಗಿನ ಆದಾಯಕ್ಕೆ ಶೂನ್ಯ, 4-8 ಲಕ್ಷ ವರೆಗಿನ ಆದಾಯಕ್ಕೆ ಶೇ.5 ರಷ್ಟು ತೆರಿಗೆ, 8-11 ಲಕ್ಷ ವರೆಗಿನ ಆದಾಯಕ್ಕೆ ಶೇ.10 ರಷ್ಟು ತೆರಿಗೆ, 12-15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇ.15 ರಷ್ಟು, 15-20 ಲಕ್ಷವರೆಗಿನ ಆದಾಯಕ್ಕೆ ಶೇ.20 ರಷ್ಟು ತೆರಿಗೆ, 20-24 ಲಕ್ಷವರೆಗಿನ ಆದಾಯಕ್ಕೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30 ರಷ್ಟು ತೆರಿಗೆ ವಿಧಿಸಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

Union Budget live: ಮಹಿಳೆಯರಿಗೆ ಗುಡ್ ನ್ಯೂಸ್, ಹೊಸ ಯೋಜನೆ ಪ್ರಕಟ