Webdunia - Bharat's app for daily news and videos

Install App

ಖ್ಯಾತ ರಂಗ ಕಲಾವಿದೆ ಚಿಂದೋಡಿ ಲೀಲಾ ಇನ್ನಿಲ್ಲ

Webdunia
MOKSHA
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ರಂಗ ಕಲಾವಿದೆ, ಚಿತ್ರನಟಿ ಚಿಂದೋಡಿ ಲೀಲಾ (72) ಗುರುವಾರ ರಾತ್ರಿ ನಿಧನ ಹೊಂದಿದ್ದಾರೆ.

ಕೆ.ಬಿ.ಆರ್ ನಾಟಕ ಕಂಪನಿ ನಡೆಸುತ್ತಿದ್ದ ಚಿಂದೋಡಿ ಲೀಲಾ ಹೃದ್ರೋಗದಿಂದ ಬಳಲುತ್ತಿದ್ದು, ಮೂರು ದಿನಗಳ ಹಿಂದಷ್ಟೆ ಬನ್ನೇರುಘಟ್ಟ ರಸ್ತೆಯ ವೋಕ್ಹಾರ್ಟ್ ಆಸ್ಪತ್ರೆಯಲ್ಲಿ ತೆರೆದ ಹೃದಯದ ಶಸ್ತ್ರಚಿಕಿತ್ಸೆಯೂ ನಡೆಸಲಾಗಿತ್ತು. ಆದರೆ ಮೂರು ದಿನಗಳ ನಂತರವೂ ಅವರಿಗೆ ಸರಿಯಾಗಿ ಪ್ರಜ್ಞೆ ಬಾರದೆ ಇದ್ದುದರಿಂದ ಗುರುವಾರ ರಾತ್ರಿ ಅವರು ನಿಧನ ಹೊಂದಿದರು.

ಇಂದು ಮಧ್ಯಾಹ್ನ 12 ಗಂಟೆಗೆ ನಗರದ ಗುಬ್ಬಿ ವೀರಣ್ಣ ರಂಗ ಮಂದಿರದ ಆವರಣದಲ್ಲಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶಕ್ಕೆ ಇಡಲಾಗುತ್ತಿದ್ದು, ಬಳಿಕ ದಾವಣಗೆರೆಗೆ ಒಯ್ಯಲಾಗುತ್ತದೆ. ಶನಿವಾರ ಬೆಳಗ್ಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಕಳೆದ ನಾಲ್ಕು ದಶಕಗಳಿಂದ ವೃತ್ತಿರಂಗಭೂಮಿಯಲ್ಲಿ ಸಾಕಷ್ಟು ತೊಡಗಿಸಿಕೊಂಡಿದ್ದ ಚಿಂದೋಡಿ ಲೀಲಾ ರಂಗಭೂಮಿಯಲ್ಲಿ ಖ್ಯಾತಿಯ ಉತ್ತುಂಗಕ್ಕೇರಿದ್ದರು. ಅವರ 'ಪೋಲೀಸನ ಮಗಳು' ನಾಟಕ ಬೆಂಗಳೂರಿನ ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಸತತ 1, 130ಕ್ಕೂ ಹೆಚ್ಚು ಪ್ರದರ್ಶನ ಕಂಡು ದಾಖಲೆ ನಿರ್ಮಿಸಿತ್ತು. ಇವರ 'ಹಳ್ಳಿಯ ಹುಡುಗಿ' ನಾಟಕ ಕೂಡಾ ಸಾಕಷ್ಟು ಹೆಸರು ಮಾಡಿತ್ತು.

ಹಲವು ಚಲನಚಿತ್ರಗಳಲ್ಲೂ ಚಿಂದೋಡಿ ಲೀಲಾ ಅಭಿನಯಿಸಿದ್ದರು. ಶರಪಂಜರ, ತುಂಬಿದ ಕೊಡ, ಗಾನಯೋಗಿ ಪಂಚಾಕ್ಷರಿ ಗವಾಯಿಗಳಂಥ ಸಿನಿಮಾಗಳಲ್ಲಿ ನಟಿಸಿದ್ದ ಅವರಿಗೆ ಕೇಂದ್ರ ಸರ್ಕಾರದ ಪದ್ಮಶ್ರೀ ಪ್ರಶಸ್ತಿ ಕೂಡ ಲಭಿಸಿತ್ತು. ಇದಲ್ಲದೆ, ಕರ್ನಾಟಕ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ನಾಟಕ ಮತ್ತು ಸಂಗೀತ ಅಕಾಡೆಮಿ ಪ್ರಶಸ್ತಿ, ತೆಲುಗು ವಿಜ್ಞಾನ ಸಮಿತಿಯ ಶ್ರೀ ಕೃಷ್ಣದೇವರಾಯ ಪ್ರಶಸ್ತಿ, ನಾಡೋಜ ಪ್ರತಿಷ್ಠಾನದ ಕಾತ್ಯಾಯಿನಿ ಪ್ರಶಸ್ತಿಗಳು ಸೇರಿದಂತೆ ಹತ್ತು ಹಲವು ಪುರಸ್ಕಾರಗಳೂ ಸಂದಿವೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments