ಕನಸು ಕನಸಾಗೇ ಉಳಿಯಿತು : ಆಶಿಕಾ

Webdunia
ಗುರುವಾರ, 11 ನವೆಂಬರ್ 2021 (14:30 IST)
ನಟ ಪುನೀತ್ ರಾಜ್ಕುಮಾರ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಬಹುದೊಡ್ಡ ಆಘಾತವನ್ನು ನೀಡಿದ್ದು, ಅವರೊಡನೆ ತೆರೆ ಹಂಚಿಕೊಳ್ಳುವ, ಕೆಲಸ ಮಾಡುವ ಕನಸನ್ನು ಹೊತ್ತಿದ್ದ ಕಲಾವಿದರ ಕನಸುಗಳು ಹಾಗೇ ಉಳಿದಿವೆ.
ಪ್ರಸ್ತುತ ಸ್ಯಾಂಡಲ್ವುಡ್ನ ಬೇಡಿಕೆಯ ನಟಿಯರಲ್ಲಿ ಒಬ್ಬರಾಗಿರುವ ಆಶಿಕಾ ರಂಗನಾಥ್ ಕೂಡ ಇದಕ್ಕೆ ಹೊರತಾಗಿಲ್ಲ. ಪುನೀತ್ ಅವರೊಂದಿಗೆ ‘ದ್ವಿತ್ವ’ ಚಿತ್ರದಲ್ಲಿ ತೆರೆಹಂಚಿಕೊಳ್ಳುವ ಸಿದ್ಧತೆಯಲ್ಲಿ ಅವರಿದ್ದರು. ಆದರೆ ಅನಿರೀಕ್ಷಿತ ಘಟನೆ ಈ ಎಲ್ಲಾ ನಿರೀಕ್ಷೆಗಳನ್ನೂ ಪುಡಿಪುಡಿ ಮಾಡಿದೆ. ಪುನೀತ್ ಜೊತೆಗಿನ ನೆನಪುಗಳನ್ನು ಹಂಚಿಕೊಂಡು ಭಾವುಕರಾಗಿದ್ದಾರೆ. ‘‘ಪುನೀತ್ ಸರ್ ಜೊತೆ ಸ್ಕ್ರೀನ್ ಶೇರ್ ಮಾಡೋ ಅವಕಾಶ ಸಿಕ್ಕಿತ್ತು. ದ್ವಿತ್ವ ಸಿನಿಮಾದಲ್ಲಿ ನಟಿಸೋಕೆ ಎಲ್ಲಾ ಸಿದ್ದತೆ ನಡೀತಿತ್ತು. ಆದರೆ ಪುನೀತ್ ಸರ್ ಜೊತ ನಟಿಸೊ ಆಸೆ ಕನಸು ಕನಸಾಗೇ ಉಳಿಯಿತು’’ ಎಂದು ಅವರು ಹೇಳಿದ್ದಾರೆ.
ಪುನೀತ್ ರಾಜಕುಮಾರ್ ಅವರೊಂದಿಗಿನ ಇತರ ಸುಂದರ ಕ್ಷಣಗಳನ್ನೂ ಅವರು ಮೆಲುಕು ಹಾಕಿದ್ದಾರೆ. ‘‘ಪುನೀತ್ ಅವರ ನೃತ್ಯ ಬಹಳ ಇಷ್ಟ. ಅವರೂ ನನ್ನ ನೃತ್ಯದ ಬಗ್ಗೆ ಪ್ರತಿಕ್ರಿಯೆ ನೀಡಿದ್ದರು’’ ಎಂದು ಆಶಿಕಾ ನುಡಿದಿದ್ದಾರೆ. ‘ಮದಗಜ’ ಚಿತ್ರದ ಸುದ್ದಿಗೋಷ್ಠಿಯ ನಂತರ ಆಶಿಕಾ ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments