Webdunia - Bharat's app for daily news and videos

Install App

ದರ್ಶನ್ ಬಿಗ್‌ ರಿಲೀಫ್‌ಗೆ ತರುಣ್, ರಕ್ಷಿತಾ, ಸೋನಲ್ ಹರ್ಷ: ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದ್ದೆ ಎಂದ ಧನ್ವೀರ್

Actor Darshan Thoogudeep Bail  Actor Dhanveer  Actress Rakshitha Pream
Sampriya
ಶುಕ್ರವಾರ, 13 ಡಿಸೆಂಬರ್ 2024 (16:30 IST)
Photo Courtesy X
ಬೆಂಗಳೂರು: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದ ಹಾಗೇ ಸ್ಯಾಂಡಲ್‌ವುಡ್‌ನ ಅವರ ಆಪ್ತರು ಖುಷಿ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.

ನಿರ್ದೇಶಕ ತರುಣ್ ಸುಧೀರ್, ನಟಿ ರಕ್ಷಿತಾ ಪ್ರೇಮ್, ನಟ ಧನ್ವೀರ್‌, ನಟಿ ಸೋನಲ್ ಮೊಂಥೆರೋ ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿದ್ದಾರೆ.  ದರ್ಶನ್‌ಗೆ ಸಿಕ್ಕಿರುವ ಬಿಗ್ ರಿಲೀಫ್ ಬಗ್ಗೆ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ ದಿನದಿಂದಲೂ ದರ್ಶನ್ ಕುಟುಂಬದ ಜತೆಗಿರುವ ನಟ ಧನ್ವೀರ್ ಅವರು ಇನ್‌ಸ್ಟಾಗ್ರಾಂನಲ್ಲಿ ಸ್ಟೋರಿ ಹಾಕಿ,  ಉಸಿರಿರುವವರೆಗೂ ಇರ್ತಿವಿ ನಿಮ್ಮಿಂದ್ದೆ ಎಂದು ಬರೆದುಕೊಂಡಿದ್ದಾರೆ. ಅದರೊಂದಿಗೆ ನಾಡದೇವತೆಗೆ ಕೈ ಮುಗಿದು ಪೋಸ್ಟ್ ಹಾಕಿದ್ದಾರೆ.

ಇನ್ನೂ ತರುಣ್ ಸುಧೀರ್ ಅವರು, ಹನುಮಾನ್ ದೇವರ ಮುಂದೆ ದರ್ಶನ್ ಇರುವ ಪೋಟೋ ಹಾಕಿ ನಾಡಿನ ಸಮಸ್ತ ಜನತೆಗೆ ಶ್ರೀ ಹನುಮ ಜಯಂತಿಯ ಶುಭಾಶಯಗಳು ಎಂದು ಬರೆದಿದ್ದಾರೆ. ಈ ಫೋಟೋಗೆ ರಾಮಾ ನಾಮ ಹಾಡಿರೋ ಹನುಮ ಬರುವನೋ , ಅವನ ಹಿಂದೆ ಹನುಮನು ಇದ್ದೆ ಇರುವನು ಎಂಬ ಹಾಡನ್ನು ಹಾಕಿದ್ದಾರೆ.

ಇನ್ನು ನಟಿ ರಕ್ಷಿತಾ ಪ್ರೇಮ್ ಅವರು ಒಳ್ಳೆಯ ಸುದ್ದಿ, ಖುಷಿಯ ದಿನ ಎಂದು ಬರೆದುಕೊಂಡಿದ್ದಾರೆ.

ನಟಿ ಸೋನಲ್ ಮೊಂಥೆರೋ ಕೂಡಾ  ಕಾಟೇರಾ ಮ್ಯೂಸಿಕ್ ಹಾಕಿ ಖುಷಿ ವ್ಯಕ್ತಪಡಿಸಿದ್ದಾರೆ.  ಒಟ್ಟಾರೆ ದರ್ಶನ್ ಅವರಿಗೆ ಈ ಪ್ರಕರಣದಿಂದ ಮುಕ್ತಿ ಸಿಕ್ಕಿರುವುದಕ್ಕೆ ಅವರ ಆಪ್ತ ವಲಯದವರು ಖುಷಿವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments