ಹೈದರಾಬಾದ್ : ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ನಿರ್ದೇಶಕ ಹರೀಶ್ ಶಂಕರ್ ಜೊತೆ ಚಿತ್ರ ಮಾಡಲು ಹೊರಟಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ ಈ ಚಿತ್ರದಲ್ಲಿ ಪವನ್ ಕಲ್ಯಾಣ್ ಮೊದಲ ಬಾರಿ ಉಪನ್ಯಾಸಕರಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಮತ್ತು ಅವರು ಈ ಚಿತ್ರದಲ್ಲಿ ದ್ವಿ ಆಯಾಮದ ಪಾತ್ರವನ್ನು ಹೊಂದಿದ್ದಾರೆಂದು ಹೇಳಲಾಗುತ್ತಿದೆ.
ಈ ಚಿತ್ರಕ್ಕೆ ದೇವಿ ಪ್ರಸಾದ್ ಸಂಗೀತ ಸಂಯೋಜನೆ ಮಾಡಲಿದ್ದು, ಈ ಚಿತ್ರಕ್ಕೆ ಸಂಚಾರಿ ಎಂಬ ಹೆಸರಿಡುವ ಸಾಧ್ಯತೆ ಇದೆ ಎನ್ನಲಾಗಿದೆ. ಚಿತ್ರದ ಚಿತ್ರಕಥೆ ಪೂರ್ಣಗೊಂಡಿದ್ದು, ತಂಡವು ಪ್ರಸ್ತುತ ಪೂರ್ವ ನಿರ್ಮಾಣ ಕಾರ್ಯದಲ್ಲಿ ನಿರತವಾಗಿದೆ. ಇದು ಈ ವರ್ಷದ ಜುಲೈನಲ್ಲಿ ಸೆಟ್ ಗೆ ಬರುವ ಸಾಧ್ತೆ ಇದೆ ಎನ್ನಲಾಗಿದೆ.