ಹೊಸ ವರ್ಷಕ್ಕೆ ಸಿಹಿ ಸುದ್ದಿ: ಹೆಣ್ಣು ಮಗುವಿನ ತಾಯಿಯಾದ ನಟಿ ಅದಿತಿ ಪ್ರಭುದೇವ

Sampriya
ಮಂಗಳವಾರ, 9 ಏಪ್ರಿಲ್ 2024 (16:32 IST)
photo Courtesy Instagram
ಬೆಂಗಳೂರು: ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಪಾಟ್ಲಾ ದಂಪತಿಗೆ ಏ 4ರಂದು ಹೆಣ್ಣು ಮಗು ಜನಿಸಿದೆ.

ಇಂದು ನಾಡಿನಾದ್ಯಂತ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಶುಭದಿನದಂದೆ ಅದಿತಿ ಅವರು ಈ ಗುಡ್‌ನ್ಯೂಸ್‌ ಅನ್ನು ಹಂಚಿಕೊಂಡಿದ್ದಾರೆ.

ಇನ್‌ಸ್ಟಾಗ್ರಾಂನಲ್ಲಿ 'ನಮ್ಮನೆ ಮಹಾಲಕ್ಷ್ಮಿ' ಎನ್ನುವ ಕ್ಯಾಪ್ಷನ್​ನೊಂದಿಗೆ ಅವರು ಮಗುವಿನ ಕೈಯನ್ನು ಅಂಗೈಯಲ್ಲಿ ಹಿಡಿದುಕೊಂಡಿರುವ ಫೋಟೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು ಶುಭಾಶಯ ಕೋರುತ್ತಿದ್ದಾರೆ.

2022ರ ನವೆಂಬರ್​ನಲ್ಲಿ ಯಶಸ್ ಪಾಟ್ಲಾ ಅವರನ್ನು ಅದಿತಿ ಪ್ರಭುದೇವ ಮದುವೆಯಾದರು.  ಮದುವೆ ನಂತರನೂ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದರು.  2024ರ ಜನವರಿ 1ರಂದು ಅದಿತಿ ಪ್ರಭುದೇವ ಅವರು ಸಿಹಿ ಸುದ್ದಿ ನೀಡಿದ್ದರು.

ಇನ್ನು ಅದಿತಿ ಪೋಸ್ಟ್‌ಗೆ ಪತಿ ಯಶಸ್ ಪಾಟ್ಲಾ ಅವರು 'ನನ್ನ ಜೀವದ ಗೆಳತಿ ಅದಿತಿ. ನಿನ್ನ ಹಾಗೆಯೇ ನಮ್ಮ ಮಗಳು' ಎಂದು  ಕಮೆಂಟ್​ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments