Webdunia - Bharat's app for daily news and videos

Install App

ಬ್ಯಾಚುಲರ್ ರಕ್ಷಿತ್ ಶೆಟ್ಟಿಗೆ 20 ಲಕ್ಷ ರೂ ಬರೆ

Sampriya
ಶನಿವಾರ, 17 ಆಗಸ್ಟ್ 2024 (15:30 IST)
Photo Courtesy X
ಬೆಂಗಳೂರು: 'ಬ್ಯಾಚುಲರ್ಸ್ ಪಾರ್ಟಿ' ಸಿನಿಮಾದಲ್ಲಿ ಅನುಮತಿ ಪಡೆಯದೇ ಎರಡು ಹಾಡುಗಳನ್ನು ಬಳಕೆ ಮಾಡಿದ್ದಕ್ಕಾಗಿ ಎಂಆರ್ ಟಿ  ಮ್ಯೂಸಿಕ್ ಸಂಸ್ಥೆಯು ದೆಹಲಿ ಹೈಕೋರ್ಟ್  ಮೆಟ್ಟಿಲೇರಿತ್ತು.

ಕಾಪಿ ರೈಟ್ ಉಲ್ಲಂಘನೆ ಆಗಿರೋ ವಿಚಾರವನ್ನು ಉಲ್ಲೇಖಿಸಿತ್ತು. ಇದೀಗ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾಯಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ.

ರಕ್ಷಿತ್ ಶೆಟ್ಟಿ ಅವರ ನಿರ್ಮಾಣದ 'ಬ್ಯಾಚುಲರ್ ಪಾರ್ಟಿ' ಸಿನಿಮಾದಲ್ಲಿ  ಎಂಆರ್‌ಟಿ ಹಕ್ಕು ಹೊಂದಿರೋ  ನ್ಯಾಯ ಎಲ್ಲಿದೆ ಮತ್ತು   'ಒಮ್ಮೆ ನಿನ್ನನ್ನು' ಹಾಡು ಬಳಕೆ ಮಾಡಿದ್ದರು.  ಹಾಡು ಬಳಕೆ ಮಾಡುವಂತೆ ಕೇಳಿಕೊಂಡಿದ್ದೆ, ಆದರೆ ಅವರು ಬೇಡಿಕೆ ಹೆಚ್ಚು ಮಾಡಿದ್ದರು. ನಮ್ಮ ಭಾಷೆಯ ಹಾಡುಗಳನ್ನು ನಾವು ಬಳಸಲು ಅನುಮತಿ ಕೇಳಬೇಕೆ. ಈ ಬಗ್ಗೆ ಕೋರ್ಟ್‌ನಲ್ಲಿ ನೋಡಿಕೊಳ್ಳುತ್ತೇನೆ ಎಂದು ಪ್ರತಿಕ್ರಿಯಿಸಿದ್ದರು.

ರಕ್ಷಿತ್ ಶೆಟ್ಟಿ ಮತ್ತು ಪರಂವಾಗೆ ಹೈಕೋರ್ಟ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ರಕ್ಷಿತ್ ಶೆಟ್ಟಿ ಕೋರ್ಟಿಗೆ ಹಾಜರಾಗದ ಕಾರಣದಿಂದಾಗಿ ಸೋಷಿಯಲ್ ಮೀಡಿಯಾ ಸೇರಿದಂತೆ, ಹಾಡುಗಳು ಬಳಕೆಯಾದ ಕಡೆಯಲ್ಲಿ ತೆಗೆದುಹಾಕಬೇಕು ಮತ್ತು 20 ಲಕ್ಷ ರೂಪಾಯಿ ಠೇವಣಿ ಇಡಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments