Publish Date: Mon, 28 Feb 2022 (09:20 IST)
Updated Date: Mon, 28 Feb 2022 (09:35 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ಇಂದಿಗೆ ನಾಲ್ಕು ತಿಂಗಳು ಕಳೆದಿದೆ. ಈ ಹಿನ್ನಲೆಯಲ್ಲಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.
ಪುನೀತ್ ಪತ್ನಿ ಅಶ್ವಿನಿ ಮತ್ತು ಕುಟುಂಬಸ್ಥರು ಬೆಳಿಗ್ಗೆಯೇ ಸಮಾಧಿಗೆ ಭೇಟಿ ನೀಡಿದ್ದು ಪೂಜೆ ಸಲ್ಲಿಸಿದ್ದಾರೆ. ಇಂದು ಕುಟುಂಬದ ಆಪ್ತರು ಮಾತ್ರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.
ಅಕ್ಟೋಬರ್ 28 ರಂದು ಪುನೀತ್ ಹೃದಯ ಸ್ತಂಬನದಿಂದಾಗಿ ಸಾವನ್ನಪ್ಪಿದ್ದರು. ಅವರ ನಿಧನವನ್ನು ಇಂದಿಗೂ ಅಭಿಮಾನಿಗಳಿಗೆ, ಕುಟುಂಬಸ್ಥರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ.