Webdunia - Bharat's app for daily news and videos

Install App

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಕನ್ನಡದ ಕೆಜಿಎಫ್ 2, ಕಾಂತಾರ ಸಿನಿಮಾಗೆ ಬಂಪರ್

Krishnaveni K
ಶುಕ್ರವಾರ, 16 ಆಗಸ್ಟ್ 2024 (14:14 IST)
ನವದೆಹಲಿ: 70 ನೇ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಕಾಂತಾರ, ಕೆಜಿಎಫ್ 2 ಸಿನಿಮಾಗಳು ಈ ಬಾರಿ ಬಂಪರ್ ಪ್ರಶಸ್ತಿ ಪಡೆದಿದೆ. ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡರೆ, ಕೆಜಿಎಫ್ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದಿದೆ.

ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಕೆಜಿಎಫ್ 2 ಸಿನಿಮಾಗೆ ಎರಡು ಪ್ರಶಸ್ತಿ ಬಂದಿದೆ. ಅತ್ಯುತ್ತಮ ಚಿತ್ರ ಮತ್ತು ಅತ್ಯುತ್ತಮ ಸಾಹಸ ವಿಭಾಗದಲ್ಲಿ ಕೆಜಿಎಫ್ 2 ಸಿನಿಮಾಗೆ ಪ್ರಶಸ್ತಿ ಬಂದಿದೆ. ಕೆಜಿಎಫ್ 2 ಸಿನಿಮಾ ಕನ್ನಡ ಚಿತ್ರರಂಗದಲ್ಲಿ ದಾಖಲೆ ಸೃಷ್ಟಿಸಿದ ಸಿನಿಮಾವಾಗಿತ್ತು. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಸಿನಿಮಾವಾಗಿದೆ.

ಇನ್ನು, ಕನ್ನಡ ಚಿತ್ರರಂಗದ ಗರಿಮೆ ಹೆಚ್ಚಿಸಿದ ಮತ್ತೊಂದು ಸಿನಿಮಾ ಎಂದರೆ ಕಾಂತಾರ. ಈ ಸಿನಿಮಾಗೂ ಎರಡು ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಮನರಂಜನಾ ಸಿನಿಮಾ ವಿಭಾಗದಲ್ಲಿ ಕಾಂತಾರಗೆ ಪ್ರಶಸ್ತಿ ಬಂದಿದೆ. ಇನ್ನು, ಬಹಳ ವರ್ಷಗಳ ನಂತರ ಕನ್ನಡಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದ್ದು, ಕಾಂತಾರ ಹೀರೋ ರಿಷಬ್ ಶೆಟ್ಟಿಗೆ ಲಭಿಸಿದೆ.

ಕಾಂತಾರ ಸಿನಿಮಾದಲ್ಲಿ ರಿಷಬ್ ಕೊನೆಯ ಕ್ಲೈಮ್ಯಾಕ್ಸ್ ದೃಶ್ಯದಲ್ಲಿ ಮಾಡಿದ ಅಭಿನಯವನ್ನು ಯಾರೂ ಮರೆಯುವಂತೇ ಇಲ್ಲ. ಮಲಯಾಳಂನ ದಿಗ್ಗಜ ನಟ ಮಮ್ಮುಟ್ಟಿ ಜೊತೆ ಅವರು ಪೈಪೋಟಿ ನಡೆಸಿ ಉತ್ತಮ ಪ್ರಶಸ್ತಿ ಲಭ್ಯವಾಗಿದೆ. ಕನ್ನಡಕ್ಕೆ ಈ ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಬಂಪರ್ ಪ್ರಶಸ್ತಿಗಳೇ ಬಂದಿದೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments