Select Your Language

Notifications

webdunia
webdunia
webdunia
webdunia

ಕಾಂತಾರ ಸಿನಿಮಾಗೆ ಇಂದು ರಾಷ್ಟ್ರಪ್ರಶಸ್ತಿ ಸ್ವೀಕರಿಸಲಿದ್ದಾರೆ ರಿಷಬ್ ಶೆಟ್ಟಿ: ಲೈವ್ ಇಲ್ಲಿದೆ

Rishab Shetty

Krishnaveni K

ಬೆಂಗಳೂರು , ಮಂಗಳವಾರ, 8 ಅಕ್ಟೋಬರ್ 2024 (09:31 IST)
ಬೆಂಗಳೂರು: ಇಂದು 70 ನೇ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, ಕನ್ನಡದ ಹೆಮ್ಮೆಯ ಸಿನಿಮಾ ಕಾಂತಾರದ ನಾಯಕ ನಟ ರಿಷಬ್ ಶೆಟ್ಟಿ ಸೇರಿದಂತೆ ಅನೇಕರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಎಲ್ಲಾ ಚಿತ್ರರಂಗದ ಕಲಾವಿದರೂ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಿನಿಮಾದ ವಿವಿಧ ವಿಭಾಗಗಳಲ್ಲದೆ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸೇರಿದಂತೆ ಸಿನಿ ಪ್ರಶಸ್ತಿಗಳನ್ನು ರಾಷ್ಟ್ರಪತಿಗಳು ವಿಜೇತರಿಗೆ ನೀಡಿ ಗೌರವಿಸಲಿದ್ದಾರೆ.

ಕಾಂತಾರ ಸಿನಿಮಾದಲ್ಲಿ ನಟನೆಗಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದುಕೊಂಡಿದ್ದರು. ನಾಯಕ ನಟ ಪ್ರಶಸ್ತಿ ಕನ್ನಡಕ್ಕೆ ಎಷ್ಟೋ ವರ್ಷಗಳ ನಂತರ ಸಿಗುತ್ತಿರುವುದು ವಿಶೇಷ. ಇದಲ್ಲದೆ ಕನ್ನಡದ ಇನ್ನೊಂದು ಹೆಮ್ಮೆಯ ಸಿನಿಮಾ ಕೆಜಿಎಫ್ 2 ಕೂಡಾ ಉತ್ತಮ ಸಾಹಸ, ಸಿನಿಮಾ ವಿಭಾಗದಲ್ಲಿ ಪ್ರಶಸ್ತಿ ಗೆದ್ದುಕೊಂಡಿದೆ.

ಮಧ್ಯಾಹ್ನ 3 ಗಂಟೆಗೆ ದೆಹಲಿಯ ವಿಜ್ಞಾನ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ನೇರಪ್ರಸಾರವನ್ನು ಡಿಡಿ ನ್ಯೂಸ್ ಯೂ ಟ್ಯೂಬ್ ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ. ಆಗಸ್ಟ್ 16 ರಂದು 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಕಾರ್ ನ ನಂಬರ್ ಪ್ಲೇಟ್ ಗಾಗಿಯೇ ರಾಕಿಂಗ್ ಸ್ಟಾರ್ ಯಶ್ ಎಷ್ಟು ಖರ್ಚು ಮಾಡಿದ್ದಾರೆ ಗೊತ್ತಾ