Select Your Language

Notifications

webdunia
webdunia
webdunia
webdunia

ನಿರ್ಮಾಪಕರ ವಿರುದ್ಧ ಕಿಚ್ಚ ಕಾನೂನು ಸಮರ

A bitter legal battle against the producers
bangalore , ಭಾನುವಾರ, 9 ಜುಲೈ 2023 (16:40 IST)
ಸ್ಯಾಂಡಲ್‌ವುಡ್‌ ನಿರ್ಮಾಪಕ, ವಿತರಕ M.N.ಕುಮಾರ್ ವಿರುದ್ಧ ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್ ದೂರು ನೀಡಿದ್ದಾರೆ.. ಸುದೀಪ್‌ ಅವರು ಸಿನಿಮಾ ಮಾಡುವುದಾಗಿ ಅಡ್ವಾನ್ಸ್‌ ತೆಗೆದುಕೊಂಡು ಕೈಗೆ ಸಿಗುತ್ತಿಲ್ಲ ಎಂದೆಲ್ಲಾ ಹಲವು ಆರೋಪ ಮಾಡಿದ ಕುಮಾರ್‌ ಅವರಿಗೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ನೋಟಿಸ್‌ ನೀಡಲಾಗಿದೆ. ಹಾಗೆಯೇ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗಿದೆ. ಇಷ್ಟು ದಿನ ಸುಮ್ಮನಿದ್ದ ಕಿಚ್ಚ ಸುದೀಪ್​ ಮೌನ ಮುರಿದಿದ್ದು, ಕಾನೂನು ಸಮರಕ್ಕೆ ಸಜ್ಜಾಗಿದ್ದಾರೆ.. ನೀವು ನನ್ನ ತಾಳ್ಮೆಯನ್ನು ಪರೀಕ್ಷಿಸಿದ್ದೀರಿ, ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನನ್ನದೇ ಆದ ರೀತಿಯಲ್ಲಿ ಉತ್ತರ ಕೊಡಲು ಕಾಯುತ್ತಿದ್ದೆ. ನೀವು ಮಾಡಿರುವ ಎಲ್ಲಾ ಆರೋಪಗಳನ್ನು ಸಾಬೀತುಪಡಿಸಿ. ಇಲ್ಲವಾದಲ್ಲಿ 10 ಕೋಟಿ ಮಾನನಷ್ಟದ ದಂಡ ಕಟ್ಟಿಕೊಡಿ ಎಂದು ಸುದೀಪ್​ ದೂರು ದಾಖಲಿಸಿದ್ದಾರೆ. ಕುಮಾರ್​​​​​ಗೆ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದನೆ ನೀಡಿದ ನಿರ್ಮಾಪಕ ಎನ್.ಎಂ. ಸುರೇಶ್ ಮೇಲೂ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂತಾರ 2 ಬಗ್ಗೆ ಹೊಸ ಅಪ್ ಡೇಟ್ ಕೊಟ್ಟ ರಿಷಬ್ ಶೆಟ್ಟಿ