Publish Date: Mon, 03 Aug 2026 (14:00 IST)
Updated Date: Mon, 03 Aug 2026 (14:03 IST)
ಬೆಂಗಳೂರು: ಕಳೆದ ವಾರ ಬಿಡುಗಡೆಯಾದ ರಾಮಾಯಣ ಸಿನಿಮಾದ ಟ್ರೈಲರ್ ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಜೀವತುಂಬಿದ್ದು, ಅವರ ಪಾತ್ರ ಎಲ್ಲರ ಮನಗೆದ್ದಿತ್ತು.
ಯಶ್ ಅಭಿಮಾನಿಗಳಿಗೆ ಇದೀಗ ಡಬಲ್ ಧಮಾಕಾ. ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾಗಾಗಿ ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಯಶ್ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಗ್ ಅಪ್‌ಡೇಟ್ ನೀಡಿದ್ದಾರೆ.
ಈ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ನಯನತಾರಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬಹುತಾರಾಗಣ ಇರುವ ಈ ಸಿನಿಮಾ ಕನ್ನಡದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸುವ ನಿರೀಕ್ಷೆಯಲ್ಲಿದೆ.
ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಈ ಸಿನಿಮಾವನ್ನು ಚಿತ್ರೀಕರಿಸಲಾಗಿದ್ದು, ಬಳಿಕ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದೆ. ಸಿನಿಮಾದಲ್ಲಿ ಯಶ್ ರಾಯ್ ಮತ್ತು ಟಿಕೆಟ್ ಎಂಬ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಗೀತು ಮೋಹನ್‌ದಾಸ್ ನಿರ್ದೇಶನದ ಟಾಕ್ಸಿಕ್ ಸಿನಿಮಾ ಸ್ಯಾಂಡಲ್‌ವುಡ್‌ನಿಂದ ಹಿಡಿದು ಹಾಲಿವುಡ್‌ವರೆಗೂ ಭಾರೀ ನಿರೀಕ್ಷೆ ಮೂಡಿಸಿದ್ದು, ಇದೀಗ ಟ್ರೈಲರ್ ಬಿಡುಗಡೆಯ ದಿನಾಂಕವೂ ರಿವೀಲ್ ಆಗಿದೆ.
ಆಗಸ್ಟ್ 8ರ ಶನಿವಾರ ಟಾಕ್ಸಿಕ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ. ಆದರೆ, ಟ್ರೈಲರ್ ಯಾವ ಸಮಯಕ್ಕೆ ಬಿಡುಗಡೆಯಾಗಲಿದೆ ಎಂಬುದನ್ನು ಇನ್ನೂ ಅಧಿಕೃತವಾಗಿ ತಿಳಿಸಿಲ್ಲ. ಇದೇ ವೇಳೆ, ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಯಶ್ ಹೊಸ ಬ್ಲ್ಯಾಕ್ & ವೈಟ್ ಪೋಸ್ಟರ್ ಹಂಚಿಕೊಂಡಿದ್ದಾರೆ.
ಹೊಸ ಪೋಸ್ಟರ್‌ನಲ್ಲಿ ಮಳೆಯ ನಡುವೆ ನಿಂತಿರುವ ಯಶ್ ಅವರ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ. ಟೋಪಿ, ಉದ್ದನೆಯ ಕೋಟ್ ಧರಿಸಿ ಕೈಯಲ್ಲಿ ಬಂದೂಕು ಹಿಡಿದಿರುವ ಅವರ ಸ್ಟೈಲಿಶ್ ಲುಕ್‌ಗೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ