Select Your Language

Notifications

webdunia
webdunia
webdunia
webdunia

ಡಿವೋರ್ಸ್‌ ಬೆನ್ನಲ್ಲೇ ಹೆಸರು ಬದಲಾಯಿಸಿಕೊಂಡ ಖ್ಯಾತ ನಟ: ಹೊಸ ಅಧ್ಯಾಯ ಶುರು ಎಂದ ಜಯಂ ರವಿ

actor Jayam Ravi

Sampriya

ಚೆನ್ನೈ , ಮಂಗಳವಾರ, 14 ಜನವರಿ 2025 (16:41 IST)
Photo Courtesy X
ಚೆನ್ನೈ: ಕಾಲಿವುಡ್‌ನ ಖ್ಯಾತ ನಟರಲ್ಲಿ ಜಯಂ ರವಿ ಕೂಡ ಒಬ್ಬರು. ವಿಭಿನ್ನ ಪಾತ್ರಗಳ ಮೂಲಕ ಗಮನಸೆಳೆದ ಅವರೀಗ ಹೆಸರು ಬದಲಿಸಿಕೊಂಡಿದ್ದಾರೆ.

ಜಯಂ ರವಿ ಅವರು ಕಳೆದ ಸೆಪ್ಟಂಬರ್‌ನಲ್ಲಿ ಪತ್ನಿ ಆರತಿಗೆ ವಿಚ್ಛೇದನ ನೀಡುತ್ತಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಜಯಂ ರವಿ ಅವರು ಇನ್ಮುಂದೆ ರವಿ ಮೋಹ ಆಗಿ ಬದಲಾಗಿದ್ದಾರೆ. ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಶುಭ ಕೋರುತ್ತಾ ತಾವು ಇಲ್ಲಿವರೆಗೆ ಜಯಂ ರವಿಗೆ ನೀಡಿದ ಬೆಂಬಲವನ್ನು ರವಿ ಮೋಹನ್ ಹೆಸರಿಗೂ ನೀಡಬೇಕು ಎಂದಿದ್ದಾರೆ.

ಜಯಂ ರವಿ ಅವರು ರವಿ ಮೋಹನ್ ಆಗಿ ಹೆಸರು ಬದಲಾಯಿಸಿಕೊಳ್ಳುವುದರ ಜೊತೆಗೆ ಹೊಸ ಅಧ್ಯಾಯ ಆರಂಭಿಸಿದ್ದಾರೆ. ರವಿ ಮೋಹನ್ ಸ್ಟುಡಿಯೋಸ್ ಎಂಬ ಹೆಸರಿನ ಪ್ರೊಡಕ್ಷನ್ ಹೌಸ್ ಪ್ರಾರಂಭಿಸಿದ್ದಾರೆ.

ಈ ಸಂಸ್ಥೆಯಡಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿ ಒಳ್ಳೆಯ ಸಿನಿಮಾಗಳನ್ನು, ನಿರ್ದೇಶಕರು ಹಾಗೂ ಹೊಸ ನಾಯಕರನ್ನು ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡುವುದಾಗಿ ರವಿ ಮೋಹನ್ ಘೋಷಣೆ ಮಾಡಿದ್ದಾರೆ.

ರವಿ ಮೋಹನ್ ತಮ್ಮನ್ನು ಇಲ್ಲಿವರೆಗೆ ಬೆಳೆಸಿದ ಹಾಗೂ ಬೆಂಬಲಿಸಿ ಅಭಿಮಾನಿಗಳಿಗೆ ಏನಾದರೂ ಮರಳಿ ಕೊಡಬೇಕೆಂಬ ತೀರ್ಮಾನಕ್ಕೆ ಬಂದಿದ್ದಾರೆ. ಅದಕ್ಕಾಗಿ ರವಿ ಮೋಹನ್ ಫ್ಯಾನ್ಸ್ ಕ್ಲಬ್ ಗಳು ರವಿ ಮೋಹನ್ ಫ್ಯಾನ್ಸ್ ಫೌಂಡೇಶನ್ ಎಂಬ ರಚನಾತ್ಮಕ ಸಂಸ್ಥೆಯಾಗಿ ಪರಿವರ್ತನೆಯಾಗಿವೆ. ಈ ಫೌಂಡೇಷನ್ ಮೂಲಕ ಅಗತ್ಯವಿರುವ ಎಲ್ಲರಿಗೂ ಸಹಾಯ ಮಾಡುವುದಾಗಿ ಅವರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಕ್ಕ ಅಡ್ಡಕ್ಕೆ ಸಂಜನಾ ಭರ್ಜರಿ ಎಂಟ್ರಿ: ಯುವನೊಂದಿಗೆ ರೊಮ್ಯಾನ್ಸ್‌ಗೆ ರೆಡಿಯಾದ ಸಲಗ ಬ್ಯೂಟಿ