ಮುಂಬೈ : ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸುತ್ತಿರುವ ಕೇಸರಿ ಚಿತ್ರದ ಸೆಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ಮಾಹಿತಿ ತಿಳಿದುಬಂದಿದೆ.
ಮಹಾರಾಷ್ಟ್ರದ ಸತಾರಾ ಜಿಲ್ಲೆಯಿಂದ 30 ಕಿ.ಮಿ ದೂರದಲ್ಲಿರುವ ವೈ ತೆಹಸಿಲ್‍ನ ಪಿಂಪೋಡೆ ಬುದ್ರಕ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆದರೆ ಈ ಅವಘಡ ಸಂಭವಿಸುವಾಗ ನಟ ಅಕ್ಷಯ್ ಕುಮಾರ್ ತಮ್ಮ ಭಾಗದ ಚಿತ್ರೀಕರಣವನ್ನು ಪೂರ್ಣಗೊಳಿಸಿ ಅಲ್ಲಿಂದ ಹೊರಟು ಹೋಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಘಟನೆ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯ ಪೋಲಿಸ್ ಸಿಬ್ಬಂದಿ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳು ಚಿತ್ರಿಕರಿಸುವಾಗ ಬಾಂಬ್‍ಗಳನ್ನು ಉಪಯೋಗಿಸುತ್ತಿದ್ದರು. ಆಗ ಬೆಂಕಿಯ ಕಿಡಿ ಒಂದು ವಸ್ತುವಿನ ಮೇಲೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ ಚಿತ್ರದ ಶೂಟಿಂಗ್ ನಡಿಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ