Webdunia - Bharat's app for daily news and videos

Install App

ಯೂಟ್ಯೂಬರ್‌ನ ಕೊಳಕು ಮನಸ್ಥಿತಿಯ ಹೇಳಿಕೆಗೆ ಕೆಂಡಾಮಂಡಲವಾದ ನ್ಯಾಯಮೂರ್ತಿ

Sampriya
ಮಂಗಳವಾರ, 18 ಫೆಬ್ರವರಿ 2025 (14:48 IST)
ನವದೆಹಲಿ: ಇಂಡಿಯಾಸ್‌ ಗಾಟ್‌ ಲ್ಯಾಟೆಂಟ್  ಕಾರ್ಯಕ್ರಮದ ಅಶ್ಲೀಲ ಹೇಳಿಕೆ ಮೂಲಕ ಸುದ್ದಿಯಾಗಿರುವ ಯೂಟ್ಯೂಬರ್ ರಣವೀರ್‌ ಅಲಹಬಾದಿಯ ಬಂಧನಕ್ಕೆ ಸುಪ್ರೀಂಕೋರ್ಟ್  ಮಂಗಳವಾರ ತಡೆ ನೀಡಿದೆ.

ತನ್ನ ವಿರುದ್ಧ ದಾಖಲಾಗಿರುವ ವಿವಿಧ ಎಫ್‌ಐಆರ್‌ಗಳನ್ನು ಒಟ್ಟುಗೂಡಿಸಿ ಮಧ್ಯಂತರ ರಕ್ಷಣೆ ಕೋರಿ ರಣವೀರ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದೆ ನ್ಯಾ ಸೂರ್ಯಕಾಂತ್ ಮತ್ತು ಎನ್ ಕೋಟಿಶ್ವರ್ ಸಿಂಗ್ ಪೀಠ ಪ್ರಕರಣಗಳಲ್ಲಿ ತನಿಖೆಗೆ ಸಹಕರಿಸುವಂತೆ ಸೂಚಿಸಿ ಯಾವುದೇ ಹೊಸ ಪ್ರಕರಣ ದಾಖಲಿಸಿದಂತೆ ನಿರ್ದೇಶಿಸಿ ಬಂಧನಕ್ಕೆ ಮಧ್ಯಂತರ ತಡೆ ನೀಡಿತು.

ಇನ್ನೂ ವಿಚಾರಣೆ ಸಂದರ್ಭದಲ್ಲಿ ರಣವೀರ್‌ ಹೇಳಿಕೆಗೆ ನ್ಯಾ,ಸೂರ್ಯಕಾಂತ್ ಅವರು ಆಕ್ಷೇಪ ವ್ಯಕ್ತಪಡಿಸಿ, ಯೂಟ್ಯೂಬರ್ ನಡವಳಿಕೆ ವಿರುದ್ಧ ಖಾರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಿಮ್ಮ ಹೇಳಿಕೆ ಅಶ್ಲೀಲವಲ್ಲದಿದ್ದರೆ ಮತ್ತೇನು? ನೀವು ಯಾವಾಗ ಬೇಕಾದರೂ ನಿಮ್ಮ ಅಸಭ್ಯತೆಯನ್ನು ತೋರಿಸಬಹುದೇ? ಇಡೀ ದೇಶದ ಪೋಷಕರನ್ನು ಅವಮಾನಿಸಿದ್ದೀರಿ ಎಂದು ಯೂಟ್ಯೂಬರ್ ವಿರುದ್ಧ ಕೆಂಡಮಂಡಲವಾಗಿದ್ದಾರೆ.

ನೀವು ಜನಪ್ರಿಯರಾಗಿದ್ದೀರಿ ಎಂಬ ಕಾರಣಕ್ಕೆ ಸಮಾಜವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ಈ ಭಾಷೆಯನ್ನು ಇಷ್ಟಪಡುವವರು ಭೂಮಿಯ ಮೇಲೆ ಯಾರಾದರೂ ಇದ್ದಾರೆಯೇ? ಇಷ್ಟಪಟ್ಟರೇ ಅವರ ಮನಸ್ಸಿನಲ್ಲಿ ಏನೋ ಕೊಳಕಿದೆ ಎಂದರ್ಥ ಎಂದರು.

ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಪುತ್ರ ಅಭಿನವ್ ಚಂದ್ರಚೂಡ್ ಅವರು ರಣವೀರ್ ಪರ ವಾದ ಮಂಡಿಸಿ, ತಮ್ಮ ಕಕ್ಷಿದಾರರಿಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಹೇಳಿದರು. ಯೂಟ್ಯೂಬರ್‌ನ ನಾಲಿಗೆ ಕತ್ತರಿಸುವವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾದ ಪ್ರಕರಣವನ್ನು ಅವರು ಉಲ್ಲೇಖಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments