ರಿಷಬ್ ಶೆಟ್ಟಿ ಅವರು ಆ್ಯಕ್ಷನ್ ಕಟ್ ಹೇಳಿ, ನಟನೆ ಮಾಡಿರುವ ಕಾಂತಾರ ಚಾಪ್ಟರ್ 1ಗೆ ದೇಶ ವಿದೇಶದಲ್ಲಿ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ. 125ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಸಿನಿಮಾಗ ಬಿಡುಗಡೆಯಾದ 5 ದಿನಕ್ಕೆ 335ಕೋಟಿ ಬಾಜಿ, ಎಲ್ಲ ಸಿನಿಮಾ ಥಿಯೇಟರ್‌ನಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ.
ಈ ಸಿನಿಮಾಗೆ ಬಾಲಿವುಡ್, ಟಾಲಿವುಡ್, ಕಾಲಿವುಡ್ ನಿರ್ದೇಶಕರು, ನಿರ್ಮಾಪಕರು, ನಟ ನಟಿಯರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ರಿಷಬ್ ಶೆಟ್ಟಿ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು. ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು ಮತ್ತು ಕನ್ನಡ ಸಿನಿಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ ಎಂದು ಬರೆದುಕೊಂಡಿದ್ದಾರೆ.
ಸಿನಿಮಾದಲ್ಲಿ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್, ರಾಕೇಶ್ ಪೂಜಾರಿ, ಪ್ರಮೋದ್ ಶೆಟ್ಟಿ, ಅಚ್ಯುತ್ ಕುಮಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.