Daily Horoscope

Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗಾಗಿ ಆದಿಪುರುಷ್ ಪ್ರೀಮಿಯರ್ ಶೋ

ಆದಿಪುರುಷ್
Photo Courtesy: Twitter
ಬೆಂಗಳೂರು: ಪ್ರಭಾಸ್ ನಾಯಕರಾಗಿರುವ ತೆಲುಗು ಮೂಲದ ಪ್ಯಾನ್ ಇಂಡಿಯಾ ಸಿನಿಮಾ ಆದಿಪುರುಷ್ ಕನ್ನಡದಲ್ಲೂ ತೆರೆ ಕಾಣುತ್ತಿದೆ.

ಕೆಆರ್ ಜಿ ಸ್ಟುಡಿಯೋಸ್ ಕರ್ನಾಟಕದಲ್ಲಿ ಸಿನಿಮಾ ಬಿಡುಗಡೆ ಮಾಡುತ್ತಿದೆ. ಶ್ರೀರಾಮಚಂದ್ರನಾಗಿ ಪ್ರಭಾಸ್ ಮಿಂಚಿದ್ದಾರೆ. ಈ ಸಿನಿಮಾದ ಪ್ರೀಮಿಯರ್ ಶೋವನ್ನು ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗಾಗಿ ಆಯೋಜಿಸಲು ಕೆಆರ್ ಜಿ ಸ್ಟುಡಿಯೋಸ್ ತೀರ್ಮಾನಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ಮಾಪಕ ಕಾರ್ತಿಕ್ ಗೌಡ, ಜೂನ್ 16 ರಂದು ಕನ್ನಡ ಸಿನಿಮಾ ರಂಗದ ಸೆಲೆಬ್ರಿಟಿಗಳಿಗಾಗಿ ವಿಶೇಷ ಪ್ರದರ್ಶನ ಆಯೋಜಿಸಲಾಗುತ್ತದೆ. ಇದು ಅದ್ಧೂರಿ ಸಮಾರಂಭವಾಗಲಿದೆ ಎಂದಿದ್ದಾರೆ. ರಾಕಿಂಗ್ ಸ್ಟಾರ್ ಯಶ್, ರಿಷಬ್ ಶೆಟ್ಟಿ, ರಮ್ಯಾ, ಯುವರಾಜ್ ಕುಮಾರ್ ಸೇರಿದಂತೆ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಭಾಗಿಯಾಗುವ ನಿರೀಕ್ಷೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ ಚಿತ್ರರಂಗದ ಶ್ರೀಮಂತ ಟಾಪ್ 7 ಕಾಮಿಡಿಯನ್ ಯಾರು?