Webdunia - Bharat's app for daily news and videos

Install App

ಅಭಿಮಾನಿಗಳ ಬಯಕೆಯಂತೇ ಮಗನ ಕರೆದ ಅಭಿಷೇಕ್ ಅಂಬರೀಶ್

Sampriya
ಸೋಮವಾರ, 18 ನವೆಂಬರ್ 2024 (19:14 IST)
Photo Courtesy X
ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಅವರ ಮನೆಗೆ ಮುದ್ದು ಕಂದಮ್ಮನ ಆಗಮನವಾಗಿದ್ದು, ಈ ಸಂತಸದ ಸಲುವಾಗಿ ಅಭಿಷೇಕ್ ಇನ್‌ಸ್ಟಾಗ್ರಾಂನಲ್ಲಿ ವಿಶೇಷ ಪೋಸ್ಟ್‌ವೊಂದನ್ನು ಶೇರ್ ಮಾಡಿದ್ದಾರೆ.

ನವೆಂಬರ್‌ 12ರಂದು ಅವಿವಾ ಹಾಗೂ ಅಭಿಷೇಕ್ ದಂಪತಿಗೆ ಗಂಡು ಮಗು ಜನಿಸಿತತು. ಮಗುವನ್ನು ಸುಮಲತಾ ಅವರು ಎತ್ತಿಕೊಂಡಿರುವ ಫೋಟೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ನೋಡಿದ ಅಭಿಮಾನಿಗಳು ಅಂಬರೀಶ್ ಮತ್ತೇ ಹುಟ್ಟಿ ಬಂದರು ಎಂದು ಹಾರೈಸಿದರು.  

ಇದೀಗ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಪೋಸ್ಟ್‌ನಲ್ಲಿ ಅಂಬರೀಶ್ ಫೋಟೋ ಹಾಕಿ ನಮಗೆ ಬೇಬಿ ರೆಬೆಲ್‌ ಎಂದಿದ್ದಾರೆ.

ಎಲ್ಲರಿಗೂ ನಮಸ್ಕಾರ, ನವೆಂಬರ್ 12ರಂದು ನಮ್ಮ ಕುಟುಂಬಕ್ಕೆ ಅತೀವ ಸಂತಸದ ದಿನ. ರೆಬೆಲ್ ಸ್ಟಾರ್ ಅಂಬರೀಶ್ ಅಣ್ಣನ ಆಶೀರ್ವಾದ, ಗುರು-ಹಿರಿಯರ ಆಶೀರ್ವಾದದಿಂದ ಗಂಡು ಮಗು ಜನಿಸಿದ್ದು, ತಾಯಿ- ಮಗು ಆರೋಗ್ಯವಾಗಿದ್ದಾರೆಂದು ಈ ಮೂಲಕ ತಮ್ಮೆಲ್ಲರಿಗೂ ತಿಳಿಸಲು ಇಚ್ಛಿಸುತ್ತೇನೆ ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ.

ಅಂಬರೀಶ್ ಫೋಟೋ ಶೇರ್ ಮಾಡಿ ಮಗನನ್ನು ಬೇಬಿ ರೆಬೆಲ್ ಎಂದು ಬರೆದುಕೊಂಡಿದ್ದಾರೆ. ಆದಷ್ಟು ಬೇಗ ಬೇಬಿ ರೆಬೆಲ್ ಫೋಟೋ ರಿವೀಲ್ ಮಾಡಿ ಎಂದು ಫ್ಯಾನ್ಸ್ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಿಷಬ್ ಶೆಟ್ಟಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕಾಂತಾರ ಚಾಪ್ಟರ್ 1 ಗೆ ಬಹಿಷ್ಕಾರವಂತೆ: ಶೆಟ್ರು ಹೇಳಿದ್ದೇನು

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಮುಂದಿನ ಸುದ್ದಿ
Show comments