Publish Date: Wed, 05 Apr 2023 (17:13 IST)
Updated Date: Wed, 05 Apr 2023 (17:15 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್-ಸಮಲತಾ ಪುತ್ರ, ನಟ ಅಭಿಷೇಕ್ ಅಂಬರೀಶ್ ಪ್ರಧಾನಿ ಮೋದಿಯನ್ನು ಭೇಟಿಯಾಗಿ ತಮ್ಮ ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ನೀಡಿದ್ದಾರೆ.
ಅಭಿಷೇಕ್ ಅಂಬರೀಶ್ ಕೆಲವು ದಿನಗಳ ಹಿಂದೆ ಮಾಡೆಲ್ ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಜೂನ್ ತಿಂಗಳಲ್ಲಿ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ.
ಇದೀಗ ತಮ್ಮ ತಾಯಿ, ಸಂಸದೆ ಸುಮಲತಾ ಅಂಬರೀಶ್ ಜೊತೆಗೆ ಪ್ರಧಾನಿ ಮೋದಿಯವರನ್ನು ಭೇಟಿಯಾದ ಅಭಿಷೇಕ್ ತಮ್ಮ ಮದುವೆಯ ಮೊದಲ ಆಮಂತ್ರಣ ಪತ್ರಿಕೆಯನ್ನು ನೀಡಿ ಮದುವೆಗೆ ಆಹ್ವಾನಿಸಿದ್ದಾರೆ. ಬೆಂಗಳೂರಿನಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದ್ದು, ಮಂಡ್ಯದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಸಾಕಷ್ಟು ರಾಜಕೀಯ, ಸಿನಿಮಾ ಕ್ಷೇತ್ರದ ಗಣ್ಯರನ್ನು ಆಗಮಿಸುವ ನಿರೀಕ್ಷೆಯಿದೆ.