Select Your Language

Notifications

webdunia
webdunia
webdunia
webdunia

ಕಾವೇರಿ ಹೋರಾಟದಲ್ಲಿ ಭಾಗಿಯಾಗಲಿರುವ ನಟ ಅಭಿಷೇಕ್ ಅಂಬರೀಶ್

ಅಭಿಷೇಕ್ ಅಂಬರೀಶ್
ಮಂಡ್ಯ , ಶುಕ್ರವಾರ, 22 ಸೆಪ್ಟಂಬರ್ 2023 (09:10 IST)
File photo
ಮಂಡ್ಯ: ಕಾವೇರಿ ನದಿ ವಿವಾದ ಕುರಿತಂತೆ ಸ್ಯಾಂಡಲ್ ವುಡ್ ನಟರು ಸೋಷಿಯಲ್ ಮೀಡಿಯಾದಲ್ಲಿ ಕರ್ನಾಟಕ ರೈತರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದರು.

ಇದೀಗ ನಟ ಅಭಿಷೇಕ್ ಅಂಬರೀಶ್ ನೇರವಾಗಿ ಹೋರಾಟಕ್ಕೆ ಧುಮುಕಲಿದ್ದಾರೆ. ಇಂದು ಮಂಡ್ಯದಲ್ಲಿ ರೈತರು ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಅಭಿಷೇಕ್ ಭಾಗಿಯಾಗಲಿದ್ದಾರೆ.

ಈಗಾಗಲೇ ಸಂಸದೆ ಸುಮಲತಾ ಅಂಬರೀಶ್ ಕೂಡಾ ಕಾವೇರಿ ವಿಚಾರವಾಗಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದೀಗ ಅಭಿಷೇಕ್ ನೇರವಾಗಿ ಹೋರಾಟಕ್ಕಿಳಿಯುವ ಮೂಲಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಶ್ಮಿಕಾ ಮಂದಣ್ಣ ಜೊತೆ ಈಗಲೂ ಸಂಪರ್ಕದಲ್ಲಿದ್ದೀರಾ ಎಂಬ ಪ್ರಶ್ನೆಗೆ ರಕ್ಷಿತ್ ಶೆಟ್ಟಿ ಉತ್ತರ ನೋಡಿ!