ಐಶ್ವರ್ಯ ರೈ ಬೆನ್ನಲ್ಲೇ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಷೇಕ್​ ಬಚ್ಚನ್: ಕಾರಣ ಏನು ಗೊತ್ತಾ

Sampriya
ಬುಧವಾರ, 10 ಸೆಪ್ಟಂಬರ್ 2025 (14:55 IST)
Photo Credit X
ಮುಂಬೈ: ಬಹುಭಾಷಾ ನಟಿ ಐಶ್ವರ್ಯ ರೈ ಬಚ್ಚನ್ ಅವರ ಬೆನ್ನಲ್ಲೇ ಅವರ ಪತಿ, ನಟ ಅಭಿಷೇಕ್‌ ಬಚ್ಚನ್‌ ಕೂಡಾ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇಬ್ಬರೂ ಕೂಡಾ ಒಂದೇ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಮೊರೆಹೋಗಿದ್ದಾರೆ. 

ಐಶ್ವರ್ಯ ರೈ ಅವರು ತಮ್ಮ ಒಪ್ಪಿಗೆಯಿಲ್ಲದೆ ತಮ್ಮ ವೈಯಕ್ತಿಕ ಹಕ್ಕುಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಭಿಷೇಕ್ ಬಚ್ಚನ್ ಕೂಡಾ ಪತ್ನಿಯ ಹಾದಿಯಲ್ಲೇ ಸಾಗಿದ್ದಾರೆ.

ತಮ್ಮ ಪ್ರಚಾರ ಮತ್ತು ವ್ಯಕ್ತಿತ್ವ ಹಕ್ಕುಗಳನ್ನು ರಕ್ಷಿಸಿಕೊಳ್ಳುವಂತೆ ಮತ್ತು ವೆಬ್‌ಸೈಟ್‌ಗಳು ಮತ್ತು ವೇದಿಕೆಗಳು ತಮ್ಮ ಚಿತ್ರ, ಹೋಲಿಕೆ, ವ್ಯಕ್ತಿತ್ವ ಮತ್ತು ಲೈಂಗಿಕವಾಗಿ ಸ್ಪಷ್ಟವಾದ ವಿಷಯಗಳು ಸೇರಿದಂತೆ ನಕಲಿ ವೀಡಿಯೊಗಳನ್ನು ಬಳಸುವುದನ್ನು ನಿರ್ಬಂಧಿಸಬೇಕೆಂದು ಎಂದು ಅಭಿಷೇಕ್‌ ಬಚ್ಚನ್‌ ಕೋರಿದ್ದಾರೆ.  ಮಧ್ಯಾಹ್ನ 2.30 ಕ್ಕೆ ಪ್ರಕರಣದ ವಿಚಾರಣೆ ನಡೆಯಲಿದೆ.

ನಟಿ ಐಶ್ವರ್ಯಾ ರೈ ಇದೇ ರೀತಿಯ ಪ್ರಕರಣದಲ್ಲಿ ಮಂಗಳವಾರ ನ್ಯಾಯಾಲಯದ ಮೆಟ್ಟಿಲೇರಿದ್ದರು. ಒಂದು ದಿನದ ನಂತರ ಈ ಅರ್ಜಿ ಬಂದಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರು ನಡೆಸಲಿದ್ದಾರೆ.  

ನಟ, ನಟಿಯರ ನಕಲು ಮಾಡುವುದು, ಅವರ ಚಿತ್ರಗಳು, ಅವರ ಧ್ವನಿ, ವ್ಯಕ್ತಿತ್ವವನ್ನು ಪ್ರಚಾರಕ್ಕಾಗಿ, ಜಾಹೀರಾತಿಗಾಗಿ ಇನ್ನೂ ಕೆಲವು ಕಾರಣಗಳಿಗಾಗಿ ಬಳಸಲಾಗುತ್ತದೆ. ಆದರೆ ಇದು ಮೂಲ ವ್ಯಕ್ತಿಯ ವ್ಯಕ್ತಿತ್ವದ ಹಕ್ಕಿನ ಉಲ್ಲಂಘನೆ ಆಗಿದ್ದು, ಇದೀಗ ಹಲವು ನಟ-ನಟಿಯರು ಒಬ್ಬರಾದ ಮೇಲೆ ಒಬ್ಬರಂತೆ ತಮ್ಮ ವ್ಯಕ್ತಿತ್ವ ಹಕ್ಕಿನ ರಕ್ಷಣೆಗೆ ಮುಂದಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮುಂದಿನ ಸುದ್ದಿ
Show comments