Select Your Language

Notifications

webdunia
webdunia
webdunia
webdunia

ಹೆಣ್ಣನ್ನು ನಿಂದಿಸಿದರೆ ಉದ್ದಾರ ಆಗಲ್ಲ: ದೊಡ್ಮನೆ ಸೊಸೆಯ ಬೆಂಬಲಕ್ಕೆ ನಿಂತ ಜಗ್ಗೇಶ್

Ashwini Puneeth Rajkumar

Sampriya

ಬೆಂಗಳೂರು , ಸೋಮವಾರ, 8 ಏಪ್ರಿಲ್ 2024 (09:45 IST)
ಬೆಂಗಳೂರು:  ನಟ ಪುನೀತ್ ರಾಜಕುಮಾರ್ ಪತ್ನಿ, ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ದೊಡ್ಮನೆ ಸೊಸೆಯನ್ನು ನಿಂದಿಸಿದವರನ್ನು ನವರಸನಾಯಕ ಜಗ್ಗೇಶ್ ಅವರು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

 ಹೆಣ್ಣುಕುಲ್ಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ ಹಿಡಿಶಾಪ ಹಾಕಿದ್ದಾರೆ.

ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ
ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಆವೃತ್ತಿಯ ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಅತಿಥಿಯಾಗಿ ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇನ್ನೂ ಆರ್‌ಸಿಬಿ ಸತತ ಸೋಲು ಅನುಭವಿಸಿದ್ದು, ಇದಕ್ಕೆಲ್ಲ ಅಶ್ವಿನಿ ಪುನೀತ್ ಅವರ ಕಾಲ್ಗುಣ ಎಂದು ನಿಂದಿಸಿ ಗಜಪಡೆ ಎಂಬ ಖಾತೆಯಿಂದ ಕೆಟ್ಟ ಕಮೆಂಟ್ ಮಾಡಲಾಗಿದೆ.

ಇದರಿಂದ ಅಪ್ಪು ಅಭಿಮಾನಿಗಳು ಆಕ್ರೋಶ ಹೊರಹಾಕಿ ಕೂಡಲೇ ಪೋಸ್ಟ್ ಹಾಕಿದ ವ್ಯಕ್ಯಿಯನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೇಸತ್ತ ಅಭಿಮಾನಿಗಳಿಂದ ಕಿಚ್ಚ ಸುದೀಪ್ ಗೆ ಡಿಮ್ಯಾಂಡ್