Select Your Language

Notifications

webdunia
webdunia
webdunia
webdunia

ಸಿಎಂ ಬೆನ್ನಲ್ಲೇ ಅಲ್ಲು ಅರ್ಜುನ್ ವಿರುದ್ಧ ಗುಡುಗಿದ ಎಸಿಪಿ ಸಬ್ಬತಿ ವಿಷ್ಣುಮೂರ್ತಿ, ಕಾರಣ ಹೀಗಿದೆ

ACP Sabbati Vishnu, Actor Allu Arjun, Chief Minister Revanth Reddy

Sampriya

ಹೈದರಾಬಾದ್ , ಭಾನುವಾರ, 22 ಡಿಸೆಂಬರ್ 2024 (17:09 IST)
Photo Courtesy X
ಹೈದರಾಬಾದ್: ಈಚೆಗೆ ನಟ ಅಲ್ಲು ಅರ್ಜುನ್ ವಿರುದ್ಧ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಗುಡುಗಿದ ಬೆನ್ನಲ್ಲೆ ಎಸಿಪಿ ಸಬ್ಬತಿ ವಿಷ್ಣುಮೂರ್ತಿ ಅವರು ಪುಷ್ಪ  ಸಿನಿಮಾದ ನಟ ಅಲ್ಲು ಅರ್ಜುನ್‌ ವಿರುದ್ಧ ಕೂಡಾ ವಾಗ್ದಾಳಿ ನಡೆಸಿದ್ದಾರೆ.

ಪುಷ್ಪ ಪ್ರೀಮಿಯರ್ ಶೋ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಪೊಲೀಸರ ಭದ್ರತಾ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ ಎಂದು ಅಲ್ಲು ಅರ್ಜುನ್‌ ಗಂಭೀರ ಆರೋಪ ಮಾಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಎಸಿಪಿ, ಥಿಯೇಟರ್‌ಗೆ ಹೋಗಲು ಅನುಮತಿ ಇತ್ತು ಅಂತ ಸುಳ್ಳು ಹೇಳುತ್ತಿದ್ದಾರೆ. ಅಲ್ಲು ಅರ್ಜುನ್‌ ಅವರಿಗೆ ಸಂವಿಧಾನಿಕ ಜ್ಞಾನದ ಕೊರತೆಯಿದೆ. ದುಡ್ಡಿನ ಮದದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಸಹೋದರರನ್ನು ಮದುವೆಗೆ ಆಹ್ವಾನಿಸಿದ ನಟ ಧನಂಜಯ್