Publish Date: Wed, 27 Apr 2022 (09:30 IST)
Updated Date: Wed, 27 Apr 2022 (09:44 IST)
ಕೊಚ್ಚಿ: ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ ಮಲಯಾಳಂ ನಟ, ನಿರ್ಮಾಪಕ ವಿಜಯ್ ಬಾಬು ವಿರುದ್ಧ ದೂರು ದಾಖಲಾಗಿದೆ.
ವಿಜಯ್ ಬಾಬು ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ. ಇದೀಗ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ರಾಜ್ಯಪ್ರಶಸ್ತಿ ಪಡೆದಿದ್ದ ನಟನ ವಿರುದ್ಧ ದೂರು ದಾಖಲಾಗಿದ್ದರೂ ಇದುವರೆಗೆ ಪೊಲೀಸರು ಕರೆಸಿ ವಿಚಾರಣೆ ನಡೆಸಿಲ್ಲ. ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.