Publish Date: Wed, 16 Jan 2019 (16:54 IST)
Updated Date: Wed, 16 Jan 2019 (16:56 IST)
ಹೈದರಾಬಾದ್: ತೆಲುಗಿನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೀವ್ರ ಅಸ್ವಸ್ಥರಾಗಿದ್ದು, ಮುಂಬೈಯ ಎಎಚ್ಐ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿರುವ ವಿಚಾರ ಬೆಳಕಿಗೆ ಬಂದಿದೆ.
ಬ್ರಹ್ಮಾನಂದಂ ತೀವ್ರ ಎದೆನೋವಿಗೆ ತುತ್ತಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಇದೀಗ ಶಸ್ತ್ರಚಿಕಿತ್ಸೆ ನಡೆದಿದ್ದು, ತೀವ್ರ ನಿಗಾ ಘಟಕದಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.
ಸದ್ಯಕ್ಕೆ ಅವರ ಪರಿಸ್ಥಿತಿ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕಪಡಬೇಕಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಎರಡು ದಿನಗಳ ಮೊದಲೇ ಅವರು ಆಸ್ಪತ್ರೆಗೆ ದಾಖಲಾಗಿದ್ದರೂ, ಅಭಿಮಾನಿಗಳು ಆತಂಕ್ಕೀಡಾಗುವುದು ಬೇಡವೆಂದು ವಿಷಯವನ್ನು ಆದಷ್ಟು ಗೌಪ್ಯವಾಗಿಡಲಾಗಿತ್ತು ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ