Publish Date: Fri, 08 Sep 2017 (09:40 IST)
Updated Date: Fri, 08 Sep 2017 (09:43 IST)
ಬೆಂಗಳೂರು: ನಟ ಚೇತನ್ ಗೆ ಜೀವ ಬೆದರಿಕೆ ಎದುರಿಸುತ್ತಿದ್ದಾರೆ. ತನಗೆ ಜೀವ ಬೆದರಿಕೆ ಇದೆ ಎಂದು ನಟ ಚೇತನ್ ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಚೇತನ್ ಇತ್ತೀಚೆಗೆ ಸಾಮಾಜಿಕ ರಾಜಕೀಯ ಹೋರಾಟಗಳಲ್ಲಿ ಸಕ್ರಿಯರಾಗಿದ್ದರು. ಅಲ್ಲದೆ, ಲಿಂಗಾಯುತ ಪ್ರತ್ಯೇಕ ಧರ್ಮದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು.
ತಮ್ಮ ಮನೆಯ ಸುತ್ತವೂ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿದ್ದಾರೆ ಎಂದು ಚೇತನ್ ಹೇಳಿಕೊಂಡಿದ್ದಾರೆ. ಇದೀಗ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಳಿಕ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಚೇತನ್ ರಕ್ಷಣೆ ಕೊಡುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.