Daily Horoscope

Select Your Language

Notifications

webdunia
webdunia
webdunia
webdunia

ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

Darshan
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್ ಮತ್ತೊಮ್ಮೆ ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ನಟ ದರ್ಶನ್ ಸೇರಿದಂತೆ ಪ್ರಮುಖ ಆರೋಪಿಗಳು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಆದರೆ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ. ಈ ಕಾರಣಕ್ಕೆ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ಸುಪ್ರೀಂಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಮೇ 4 ಕ್ಕೆ ನಿಗದಿಯಾಗಿದೆ. ಟ್ರಯಲ್ ವಿಳಂಬವಾಗುತ್ತಿದೆ. 8 ತಿಂಗಳು ಕಳೆದರೂ ಸಾಕ್ಷಿಗಳ ವಿಚಾರಣೆ ಮುಗಿದಿಲ್ಲ. ವಿಚಾರಣೆಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಹೀಗಾಗಿ ಜಾಮೀನು ನೀಡಿ ಎಂದು ಕೋರಿದ್ದಾರೆ.

ಈ ಹಿಂದೆ ದರ್ಶನ್ ಜಾಮೀನು ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ತಿರಸ್ಕೃತವಾಗಿತ್ತು. ಪರಿಣಾಮ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅವರು ಮತ್ತೆ ನ್ಯಾಯಾಂಗ ಬಂಧನಕ್ಕೊಳಗಾಗಿದ್ದರು.  ಪ್ರಕರಣದಲ್ಲಿ ಒಟ್ಟು 273 ಸಾಕ್ಷಿಗಳ ವಿಚಾರಣೆ ಆಗಬೇಕು. ಆದರೆ ಇದುವರೆಗೆ ಕೇವಲ 15 ಸಾಕ್ಷಿಗಳ ವಿಚಾರಣೆಯಷ್ಟೇ ಮುಗಿದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಟಾಕ್ಸಿಕ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ: ಕಾರಣ ತಿಳಿಸಿದ ಯಶ್