ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಬಂಧಿತರಾಗಿ ಬರೋಬ್ಬರಿ ಮೂರು ತಿಂಗಳ ಬಳಿಕ ನಟ ದರ್ಶನ್ ಸೇರಿ 6 ಮಂದಿಯ ಜಾಮೀನು ಭವಿಷ್ಯ ಇಂದು ಕೋರ್ಟ್ ನಲ್ಲಿ ತೀರ್ಮಾನವಾಗಲಿದೆ.
ದರ್ಶನ್ ಸೇರಿ 6 ಮಂದಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹೀಗಾಗಿ ಕೋರ್ಟ್ ತೀರ್ಪಿನತ್ತ ಇಂದು ಎಲ್ಲರ ಚಿತ್ತವಿದೆ. ಈಗಾಗಲೇ ದರ್ಶನ್ ಪರ ವಕೀಲ ಸಿವಿ ನಾಗೇಶ್ ಮತ್ತು ಪೊಲೀಸ್ ಪರ ವಕೀಲ ಪ್ರಸನ್ನಕುಮಾರ್ ತಮ್ಮ ವಾದ ಮಂಡಿಸಿದ್ದಾರೆ.
ದರ್ಶನ್, ಪವಿತ್ರಾ ಗೌಡ, ಪವನ್ ಸೇರಿದಂತೆ 6 ಮಂದಿ ಪ್ರಮುಖ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟವಾಗಲಿದೆ. ಒಂದು ವೇಳೆ ಜಾಮೀನು ಸಿಗದೇ ಹೋದರೆ ನಟ ದರ್ಶನ್ ಮತ್ತೆ ವೈದ್ಯಕೀಯ ಕಾರಣ ನೀಡಿ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡಲು ಮನವಿ ಮಾಡಬಹುದು.
ಈಗಾಗಲೇ ದರ್ಶನ್ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ಬೆಂಗಳೂರಿನಲ್ಲಿಯೇ ಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಹಠಕ್ಕೆ ಬಿದ್ದಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ನ್ಯಾಯಾಲಯಕ್ಕೆ ವೈದ್ಯಕೀಯ ವರದಿ ಸಲ್ಲಿಸಲಿದ್ದಾರೆ. ಇದನ್ನು ಪರಿಗಣಿಸಿ ಕೋರ್ಟ್ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬ ಕುತೂಹಲ ಇಂದು ಎಲ್ಲರಲ್ಲಿದೆ.