Webdunia - Bharat's app for daily news and videos

Install App

ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಇಂದು ಕೋರ್ಟ್ ಅಗ್ನಿಪರೀಕ್ಷೆ

Krishnaveni K
ಮಂಗಳವಾರ, 17 ಸೆಪ್ಟಂಬರ್ 2024 (09:00 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಇಂದು ನಟ ದರ್ಶನ್ ಆಂಡ್ ಗ್ಯಾಂಗ್ ಗೆ ಮತ್ತೆ ಕೋರ್ಟ್ ಕಟ ಕಟೆಯ ಅಗ್ನಿ ಪರೀಕ್ಷೆ ಎದುರಾಗಲಿದೆ. ಇಂದಿಗೆ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೊಮ್ಮೆ ಮುಕ್ತಾಯವಾಗುತ್ತಿದೆ.
 

ಮೊನ್ನೆಯಷ್ಟೇ ನ್ಯಾಯಾಲಯ ದರ್ಶನ್ ಮತ್ತು ಇತರರಿಗೆ ಸೆಪ್ಟೆಂಬರ್ 17 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿತ್ತು. ಅದರಂತೆ ಇಂದಿಗೆ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದ್ದು, ಎಲ್ಲಾ ಆರೋಪಿಗಳೂ ಮತ್ತೊಮ್ಮೆ ತಾವಿದ್ದ ಜೈಲಿನಿಂದಲೇ ನ್ಯಾಯಾಧೀಶರ ಮುಂದೆ ಹಾಜರಾಗಲಿದ್ದಾರೆ.

ಇಂದು ಕೋರ್ಟ್ ಮುಂದೆ ಆರೋಪಿಗಳು ಜಾಮೀನಿಗಾಗಿ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಪೊಲೀಸರು ಕೆಲವೊಂದು ಸಾಕ್ಷ್ಯಗಳನ್ನು ಒದಗಿಸಲು ಬಾಕಿಯಿದ್ದು, ಅದನ್ನು ನೀಡಿದ ಬಳಿಕವೇ ಜಾಮೀನಿಗೆ ಅರ್ಜಿ ಸಲ್ಲಿಸುವುದಾಗಿ ಈ ಮೊದಲು ದರ್ಶನ್ ಪರ ವಕೀಲರು ಹೇಳಿದ್ದರು. ಪವಿತ್ರಾ ಗೌಡ ಕೂಡಾ ಮೊನ್ನೆಯಷ್ಟೇ ಜಾಮೀನು ಅರ್ಜಿ ಹಿಂಪಡೆದಿದ್ದರು.
 
ಇದೀಗ ಇಂದು ಕೋರ್ಟ್ ಮುಂದೆ ದರ್ಶನ್ ಆಂಡ್ ಗ್ಯಾಂಗ್ ಯಾವೆಲ್ಲಾ ಬೇಡಿಕೆಯಿಡಬಹುದು ನೋಡಬೇಕಿದೆ. ಕಳೆದ ನಾಲ್ಕೈದು ದಿನಗಳಿಂದ ದರ್ಶನ್ ಬಳ್ಳಾರಿ ಜೈಲಿನಲ್ಲಿ ಅಧಿಕಾರಿಗಳೊಂದಿಗೆ ಕೆಲವು ವಿಚಾರಕ್ಕೆ ಕಿರಿಕ್ ಮಾಡುತ್ತಿದ್ದಾರೆ ಎಂಬ ವರದಿಗಳಿವೆ. ಪ್ರೊಟೀನ್ ಫುಡ್ ಗೆ ಅವಕಾಶ ಕೊಡಿ, ಟಿವಿ ಕೊಡಿ ಇತ್ಯಾದಿ ಬೇಡಿಕೆಯಿಡುತ್ತಿದ್ದಾರೆ. ಇದೆಲ್ಲವನ್ನೂ ಕೋರ್ಟ್ ಮುಂದಿಟ್ಟು ತಮ್ಮ ಬೇಡಿಕೆ ಪೂರೈಸಲಿದ್ದಾರಾ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments