Select Your Language

Notifications

webdunia
webdunia
webdunia
webdunia

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

Darshan

Krishnaveni K

ನವದೆಹಲಿ , ಗುರುವಾರ, 17 ಜುಲೈ 2025 (09:26 IST)
ನವದೆಹಲಿ: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಭವಿಷ್ಯ ಇಂದು ಸುಪ್ರೀಂಕೋರ್ಟ್ ನಲ್ಲಿ ತೀರ್ಮಾನವಾಗಲಿದೆ. ಇದರ ನಡುವೆ ದರ್ಶನ್ ಮಾತ್ರ ಕೂಲ್ ಆಗಿ ಥೈಲ್ಯಾಂಡ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ದರ್ಶನ್ ಹಾಗೂ ಪ್ರಮುಖ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಒಟ್ಟು 131 ದಿನ ಜೈಲು ವಾಸ ಅನುಭವಿಸಿದ್ದ ನಟ ದರ್ಶನ್ ಈಗ ಹೊರಗಡೆ ಬಂದಿದ್ದು ತಮ್ಮ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ನಡುವೆ ಶೂಟಿಂಗ್ ನಿಮಿತ್ತ ಕೋರ್ಟ್ ಅನುಮತಿ ಪಡೆದು ಥೈಲ್ಯಾಂಡ್ ಗೆ ತೆರಳಿದ್ದಾರೆ. ಥೈಲ್ಯಾಂಡ್ ನಲ್ಲಿ ಕಾಲ ಕಳೆಯುತ್ತಿರುವ ಫೋಟೋ, ವಿಡಿಯೋಗಳು ನಿನ್ನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಇದರ ನಡುವೆ ಇಂದು ಸುಪ್ರೀಂಕೋರ್ಟ್ ಅವರ ಜಾಮೀನು ಬಗ್ಗೆ ವಿಚಾರಣೆ ನಡೆಸಲಿದೆ. ದರ್ಶನ್ ಹಾಗೂ ಪ್ರಮುಖ ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈಗಾಗಲೇ ಸುಪ್ರೀಂಕೋರ್ಟ್ ಒಂದು ಹಂತದ ವಿಚಾರಣೆ ನಡೆಸಿತ್ತು. ಇದೀಗ ಮತ್ತೆ ವಿಚಾರಣೆ ನಡೆಸಲಿದ್ದು, ಇಂದು ಸುಪ್ರೀಂಕೋರ್ಟ್ ನಿರ್ಧಾರದದ ಮೇಲೆ ಎಲ್ಲರ ಕುತೂಹಲವಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿದರೆ ದರ್ಶನ್ ಆಂಡ್ ಗ್ಯಾಂಗ್ ಮತ್ತೆ ಜೈಲಿಗೆ ಹೋಗಬೇಕಾಗುತ್ತದೆ.


Share this Story:

Follow Webdunia kannada

ಮುಂದಿನ ಸುದ್ದಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ