Actor Darshan: ಗಂಡನ ಕ್ಯಾಮಾರ ಕೈ ಚಳಕಕ್ಕೆ ಫಿದಾ ಆದ ವಿಜಯಲಕ್ಷ್ಮಿ ಏನಾಡಿದ್ರು ಗೊತ್ತಾ

Sampriya
ಭಾನುವಾರ, 1 ಜೂನ್ 2025 (13:08 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಮೂಲಕ ಹೊರಬಂದಿರುವ ನಟ ದರ್ಶನ್ ಅವರು ಸದ್ಯ ಪಕ್ಕಾ ಫ್ಯಾಮಿಲಿ ಮ್ಯಾನ್ ಆಗಿದ್ದಾರೆ.

ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಜತೆ ತಮ್ಮ ಮೈಸೂರಿನ ಫಾರ್ಮ್‌ ಹೌಸ್‌ನಲ್ಲಿ ಸಮಯ ಕಳೆಯುತ್ತಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಫಾರ್ಮ್‌ ಹೌಸ್‌ನ ಮುದ್ದಾದ ಪ್ರಾಣಿಗಳ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡುತ್ತಿರುತ್ತಾರೆ. ಅಲ್ಲಿನ ವಾತಾವರಣ ಹಾಗೂ ಪ್ಯಾಮಿಲಿಯ ಅಮೂಲ್ಯ ಕ್ಷಣಗಳ ಬಗ್ಗೆ ಹಂಚಿಕೊಳ್ಳುತ್ತಿರುತ್ತಾರೆ.

ಈಚೆಗೆ ದರ್ಶನ್ ಜತೆ ಎತ್ತಿನ ಗಾಡಿಯಲ್ಲಿ ರೈಡ್ ಮಾಡಿದ ವಿಡಿಯೋವನ್ನು ಸ್ಟೋರಿ ಹಂಚಿಕೊಂಡಿದ್ದರು. ಇದನ್ನು ನೋಡಿದ ಡಿ ಬಾಸ್ ಅಭಿಮಾನಿಗಳು, ಯಾರಾ ಕೆಟ್ಟ ಕಣ್ಣು ಈ ಫ್ಯಾಮಿಲಿ ಮೇಲೆ ಬೀಳದಿರಲಿ ಎಂದು ಹಾರೈಸಿದ್ದರು.

ನಿನ್ನೆ ದರ್ಶನ್ ಅವರ ಕ್ಯಾಮರಾ ಕೈಚಳಕದ ಬಗ್ಗೆ ವಿಜಯಲಕ್ಷ್ಮಿ ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡು ತೆಂಗಿನ ಮರಗಳ ಮದ್ಯೆ ಸೂರ್ಯಾಸ್ತದ ಕ್ಷಣವನ್ನು ಕ್ಯಾಮಾರದಲ್ಲಿ ಸೆರೆ ಹಿಡಿದ್ದಾರೆ. ಈ ಫೋಟೋವನ್ನು ಹಂಚಿಕೊಂಡ ವಿಜಯಲಕ್ಷ್ಮಿ ಫೋಟೋ ಕ್ರೆಡಿಟ್‌ ಡಿ ಎಂದು ಬರೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಮೂಲಕ ಜೈಲಿನಿಂದ ಹೊರಬಂದ್ಮೇಲೆ ದರ್ಶನ್ ಫ್ಯಾಮಿಲಿ ಜತೆ ತಮ್ಮ ಫಾರ್ಮ್‌ ಹೌಸ್‌ನಲ್ಲಿ ಸಮಯ ಕಳೆದರು. ಆರೋಗ್ಯದಲ್ಲಿ ಸುಧಾರಿಸಿಕೊಂಡ ಬಳಿಕ, ಕೋರ್ಟ್ ಅನುಮತಿಯಂತೆ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಈಚೆಗೆ ಕೋರ್ಟ್‌ ವಿದೇಶಕ್ಕೂ ಪ್ರಯಾಣ ಬೆಳೆಸಲು ಷರತ್ತು ಬದ್ಧ ಜಾಮೀನು ನೀಡಿದೆ.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments