ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 7ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಕೋರಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಏಪ್ರಿಲ್22ಕ್ಕೆ ಮುಂದೂಡಿದೆ.
ನಟ ದರ್ಶನ್ ಸೇರಿದಂತೆ ಇತರ ಆರೋಪಗಳಿಗೆ ನೀಡಿದ ಜಾಮೀನು ಅರ್ಜಿಯನ್ನು ರದ್ದುಕೋರಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ದರ್ಶನ ಪರ ವಕೀಲರು ಕೌಂಟರ್ ಅಫಿಡವಿಟ್ ಸಲ್ಲಿಕೆಗೆ ಸಮಯವಕಾಶ ಕೇಳಿದ್ದು, ಸಾಕಷ್ಟು ಫೈಲ್‌ಗಳನ್ನು ತರ್ಜುಮೆ ಮಾಡಬೇಕಿದೆ. ಜೊತೆಗೆ ಎಲ್ಲ ಆರೋಪಗಳಿಗೆ ಉತ್ತರ ಸಲ್ಲಿಸಬೇಕಿದೆ. ಅದಕ್ಕಾಗಿ ಎರಡು ವಾರಗಳ ಕಾಲಾವಕಾಶ ಕೇಳಿದ್ದರು. ಹೀಗಾಗಿ ಏ.22 ರಂದು ವಿಚಾರಣೆ ನಡೆಸುವುದಾಗಿ ಪೀಠ ತಿಳಿಸಿದೆ.
ಇದಕ್ಕೂ ಮುನ್ನ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಮಾ.18ಕ್ಕೆ ನಡೆಯಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನೆಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದ್ದರು. ಇದಕ್ಕೆ ಉತ್ತರಿಸಿದ ಕೋರ್ಟ್ ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತ್ತು.