Publish Date: Tue, 03 Dec 2024 (18:36 IST)
Updated Date: Tue, 03 Dec 2024 (18:39 IST)
ಬೆಂಗಳೂರು: ಚಿಕಿತ್ಸೆಯ ದೃಷ್ಟಿಯಿಂದ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿರುವ ನಟ ದರ್ಶನ್ ಅವರು ರೆಗ್ಯುಲರ್ ಬೇಲ್ಗಾಗಿ ಪ್ರಯತ್ನಿಸುತ್ತಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಕೂಡಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಹೈಕೋರ್ಟ್ನಲ್ಲಿ ಜಾಮೀನು ಸಲುವಾಗಿ ವಾದ-ಪ್ರತಿವಾದ ನಡೆಯುತ್ತಿದೆ. ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಲಾಗಿದ್ದು, ಅಲ್ಲಿಯವರೆಗೆ ಪವಿತ್ರಾ ಗೌಡಗೆ ಜೈಲೇ ಗತಿಯಾಗಿದೆ.
ಇನ್ನೂ ಜಾಮೀನು ನೀಡುವ ಸಲುವಾಗಿ ಆರೋಪಿಗಳ ಪರವಾಗಿ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಡಿಸೆಂಬರ್ 6ರಂದು ಜಾಮೀನು ಯಾಕೆ ನೀಡಬಾರದೆಂದು ಎಸ್ಪಿಪಿ ಪ್ರಸನ್ನ ಕುಮಾರ್ ಅವರು ಪ್ರತಿವಾದ ಮಂಡಿಸಲಿದ್ದಾರೆ. ಆ ಬಳಿಕ ಜಾಮೀನಿಗೆ ಸಂಬಂಧಿಸಿದ ತೀರ್ಪನ್ನು ಹೈಕೋರ್ಟ್ ನೀಡಲಿದೆ.