Publish Date: Sat, 18 Sep 2021 (09:34 IST)
Updated Date: Sat, 18 Sep 2021 (09:36 IST)
ನಟ ದರ್ಶನ್ ಒಡೆತನದ ವಿನೇಶ್ ಫಾರಂ ಹೌಸ್ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಟಿ. ನರಸೀಪುರ ರಸ್ತೆಯಲ್ಲಿರುವ ಫಾರಂ ಹೌಸ್ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಕುಟುಂಬವೊಂದರ ಅಪ್ರಾಪ್ತೆ ಮೇಲೆ ಸೆ.13 ರಂದು ಸೋಮವಾರ ರಾತ್ರಿ ಅದೇ ತೋಟದಲ್ಲಿ ಕುದುರೆಗೆ ಲಾಯ ಹೊಡೆಯುವ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ನಜೀಮ್ ಎಂಬಾತ ಅತ್ಯಾಚಾರ ನಡೆಸಿದ್ದಾನೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದಿಂದ ಬಂದ ಕುಟುಂಬವೊಂದು ವಿನೇಶ್ ಫಾರಂ ಹೌಸ್ನಲ್ಲಿ ಕೂಲಿ ಕೆಲಸ ಮಾಡುತ್ತಿತ್ತು. ಕುಟುಂಬದಲ್ಲಿ ತಾಯಿ, ತಂದೆ ಜೊತೆಗೆ 10 ವರ್ಷದ ಮಗಳು ಹಾಗೂ ಮಗನೊಬ್ಬನಿದ್ದ. ವರ್ಗಾವಣೆ ಪತ್ರದ ಸಮಸ್ಯೆಯಿಂದ ಮಗಳು ಶಾಲೆಗೆ ಹೋಗದೆ ಕುಟುಂಬದ ಜೊತೆಯೇ ವಾಸವಿದ್ದಳು.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸೆಪ್ಟೆಂಬರ್ 13 ರಂದು ನಡೆದಿದ್ದು, ಸಂತ್ರಸ್ತೆಯ ತಾಯಿ ಸೆಪ್ಟೆಂಬರ್ 15 ರಂದು ದೂರು ನೀಡಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಆಧಾರಕದ ಮೇಲೆ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.