ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಿವಾಸದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಡಿ ಬಾಸ್ ಹಬ್ಬ ಆಚರಿಸಿಕೊಂಡಿದ್ದಾರೆ.
ಕಳೆದ ವಾರ ಜಾಮೀನಿನ ಷರತ್ತಿನಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ದರ್ಶನ್, ಮೈಸೂರಿಗೆ ತೆರಳಲು ನ್ಯಾಯಾಲಯದ ಅನುಮತಿ ಕೋರಿದ್ದರು. ಅಂತೆಯೇ ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು. ಇದೀಗ ಮೈಸೂರಿನ ಫಾರಂ ಹೌಸ್ಗೆ ತೆರಳಿರುವ ನಟ ದರ್ಶನ್, ಅಲ್ಲಿ ಪತ್ನಿಯೊಂದಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.
ಹಬ್ಬದ ದಿನದಂದು ಪತ್ನಿ ಜೊತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ದರ್ಶನ್ ಕಾಲ ಕಳೆಯುತ್ತಿದ್ದಾರೆ. ಪತಿ ಜೊತೆ ಸಾಕು ಪ್ರಾಣಿಗಳನ್ನು ನೋಡುತ್ತಿರುವ ಹಿಂಭಾಗದ ಫೋಟೋವನ್ನು ವಿಜಯಲಕ್ಷ್ಮಿ ಶೇರ್ ಮಾಡಿದ್ದಾರೆ.
ಕೊಲೆ ಪ್ರಕರಣದಲ್ಲಿ ದರ್ಶನ್ ಅವರಿಗೆ ರೆಗ್ಯೂಲರ್ ಬೇಲ್ ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಖುಷಿ ಆಗಿರೋ ಫೋಟೋಗಳನ್ನ ಶೇರ್ ಮಾಡುತ್ತಿದ್ದಾರೆ. ಇದು ದರ್ಶನ್ ಅಭಿಮಾನಿಗಳ ಖುಷಿಯನ್ನು ಡಬಲ್ ಮಾಡಿದೆ.
ನಟ ದರ್ಶನ್ ಪ್ರತಿವರ್ಷವೂ ಸಂಕ್ರಾಂತಿ ಹಬ್ಬವನ್ನು ತಮ್ಮ ಫಾರಂ ಹೌಸ್ನಲ್ಲಿ ಆಚರಣೆ ಮಾಡುತ್ತಾರೆ. ಫಾರಂ ಹೌಸ್ನಲ್ಲಿರುವ ಎತ್ತುಗಳು, ಹಸು, ಕುದುರೆ ಇನ್ನಿತರೆ ಪ್ರಾಣಿಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿಸಿ ಅವುಗಳನ್ನು ಬೆಂಕಿ ಹಾಯಿಸುತ್ತಾರೆ. ಈ ಸಂಪ್ರದಾಯವನ್ನು ಹಲವು ವರ್ಷಗಳಿಂದಲೂ ಅವರು ಪಾಲಿಸಿಕೊಂಡು ಬಂದಿದ್ದಾರೆ.