ಮೈಸೂರಿನಲ್ಲಿ ಪತ್ನಿಯೊಂದಿಗೆ ನಟ ದರ್ಶನ್‌ ಸಂಕ್ರಾಂತಿ: ಅಭಿಮಾನಿಗಳ ಖುಷಿ ಹೆಚ್ಚಿಸಿದ ವಿಜಯಲಕ್ಷ್ಮಿ

Sampriya
ಮಂಗಳವಾರ, 14 ಜನವರಿ 2025 (14:15 IST)
Photo Courtesy X
ಮೈಸೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಿವಾಸದಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ತಮ್ಮ ಕುಟುಂಬದ ಸದಸ್ಯರೊಂದಿಗೆ ಡಿ ಬಾಸ್‌ ಹಬ್ಬ ಆಚರಿಸಿಕೊಂಡಿದ್ದಾರೆ.

ಕಳೆದ ವಾರ ಜಾಮೀನಿನ ಷರತ್ತಿನಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ದರ್ಶನ್, ಮೈಸೂರಿಗೆ ತೆರಳಲು ನ್ಯಾಯಾಲಯದ ಅನುಮತಿ ಕೋರಿದ್ದರು. ಅಂತೆಯೇ ನ್ಯಾಯಾಲಯ ಅವರಿಗೆ ಅನುಮತಿ ನೀಡಿತ್ತು. ಇದೀಗ ಮೈಸೂರಿನ ಫಾರಂ ಹೌಸ್​ಗೆ ತೆರಳಿರುವ ನಟ ದರ್ಶನ್, ಅಲ್ಲಿ ಪತ್ನಿಯೊಂದಿಗೆ ಸಂಕ್ರಾಂತಿ ಹಬ್ಬ ಆಚರಣೆ ಮಾಡಿದ್ದಾರೆ.

ಹಬ್ಬದ ದಿನದಂದು ಪತ್ನಿ ಜೊತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ದರ್ಶನ್ ಕಾಲ ಕಳೆಯುತ್ತಿದ್ದಾರೆ. ಪತಿ ಜೊತೆ ಸಾಕು ಪ್ರಾಣಿಗಳನ್ನು ನೋಡುತ್ತಿರುವ ಹಿಂಭಾಗದ ಫೋಟೋವನ್ನು ವಿಜಯಲಕ್ಷ್ಮಿ ಶೇರ್ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರಿಗೆ ರೆಗ್ಯೂಲರ್ ಬೇಲ್ ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಖುಷಿ ಆಗಿರೋ ಫೋಟೋಗಳನ್ನ ಶೇರ್ ಮಾಡುತ್ತಿದ್ದಾರೆ. ಇದು ದರ್ಶನ್ ಅಭಿಮಾನಿಗಳ ಖುಷಿಯನ್ನು ಡಬಲ್‌ ಮಾಡಿದೆ.

ನಟ ದರ್ಶನ್ ಪ್ರತಿವರ್ಷವೂ ಸಂಕ್ರಾಂತಿ ಹಬ್ಬವನ್ನು ತಮ್ಮ ಫಾರಂ ಹೌಸ್​ನಲ್ಲಿ ಆಚರಣೆ ಮಾಡುತ್ತಾರೆ. ಫಾರಂ ಹೌಸ್​ನಲ್ಲಿರುವ ಎತ್ತುಗಳು, ಹಸು, ಕುದುರೆ ಇನ್ನಿತರೆ ಪ್ರಾಣಿಗಳಿಗೆ ಸ್ನಾನ ಮಾಡಿಸಿ, ಅಲಂಕಾರ ಮಾಡಿಸಿ ಅವುಗಳನ್ನು ಬೆಂಕಿ ಹಾಯಿಸುತ್ತಾರೆ. ಈ ಸಂಪ್ರದಾಯವನ್ನು ಹಲವು ವರ್ಷಗಳಿಂದಲೂ ಅವರು ಪಾಲಿಸಿಕೊಂಡು ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments