ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

Sampriya
ಬುಧವಾರ, 26 ನವೆಂಬರ್ 2025 (11:34 IST)
Photo Credit X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ನೂರು ದಿನಗಳನ್ನು ಜೈಲಿನಲ್ಲಿ ಪೂರೈಸಿದ್ದಾರೆ. 

ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನು ಮೂಲಕ ಬಿಡುಗಡೆಯಾಗಿದ್ದ ದರ್ಶನ್ ಮತ್ತೇ ಜೈಲು ಸೇರಿದ್ದರು. ಇದೀಗ ದರ್ಶನ್ ಪರಪ್ಪನ ಅಗ್ರಹಾರ ಸೇರಿ 105 ದಿನಗಳನ್ನು ಪೂರೈಸಿದ್ದಾರೆ. 

ಆಗಸ್ಟ್‌ 15ರಂದು  ಜಾಮೀನು ರದ್ದಾದ ಹಿನ್ನೆಲೆ ಅಂದೇ ದರ್ಶನ್‌ರನ್ನು ಪೊಲೀಸರು ಮತ್ತೇ ಅರೆಸ್ಟ್ ಮಾಡಿದ್ದರು. ಇನ್ನೂ ದರ್ಶನ್ ಪರಪ್ಪನ ಅಗ್ರಹಾರ ಸೇರಿದ್ಮೇಲೆ ಕನಿಷ್ಠ ಮೂಲ ಸೌಕರ್ಯ ನೀಡುತ್ತಿಲ್ಲವೆಂದು ಆರೋಪ ಮಾಡಿದ್ದರು. 

ಈ ಹಿಂದೆ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಗ್ಯಾಂಗ್ ಜತೆ ಕಾಫಿ ಕುಡಿಯುತ್ತಾ, ಸಿಗರೇಟ್ ಸೇವಿಸುತ್ತಿರುವ ಫೋಟೋ ಬಿಡುಗಡೆಯಾಗಿ ಕೆಲವು ನಿಯಮಗಳನ್ನು ಉಲ್ಲಂಘಿಸಿದ್ದರಿಂದ ಅವರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ನಂತರ ಜಾಮೀನು ಪಡೆದಿದ್ದರೂ, ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಬಳಿಕ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು. 

ಇದೀಗ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಬೇರೆ ಕೈದಿಗಳಂತೆಯೇ ದರ್ಶನ್‌ರನ್ನು ವಿಚಾರಿಸಲಾಗುತ್ತಿದೆ. ಪ್ರಾರಂಭದಲ್ಲಿ ದರ್ಶನ್ ತಲೆ ದಿಂಬು, ಹೊದಿಕೆಯನ್ನು ನೀಡಲಾಗಿಲ್ಲ. ಈ ಸಂಬಂಧ ಕೋರ್ಟ್ ಮುಖಾಂತರ ಅದನ್ನು ಪಡೆದುಕೊಂಡರು. ಆದರೆ ಸಾಮಾನ್ಯ ಕೈದಿಯಂತೆ ಇದೀಗ ದರ್ಶನ್ ಕಾಲ ಕಳೆಯುತ್ತಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments