Webdunia - Bharat's app for daily news and videos

Install App

ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಅಭಿಮಾನಿಗಳಿಗೆ ನಿರಾಸೆ

Sampriya
ಸೋಮವಾರ, 30 ಸೆಪ್ಟಂಬರ್ 2024 (15:21 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ ಹಾಗೂ ಪವಿತ್ರಾ ಗೌಡಗೆ ನಿರಾಸೆಯಾಗಿದೆ.  ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಜೈಲು ಸೇರಿದ್ದಾರೆ. ಇಂದು  ಬೆಂಗಳೂರಿನ ಸೆಷನ್‌ ಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಇದೀಗ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಮೂರನೇ ಬಾರಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಈಗಾಗಲೇ ಪ್ರಕರಣ ಮೂವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಇಂದು ದರ್ಶನ್‌ಗೆ ಜಾಮೀನು ಸಿಗಬಹುದೆಂಬ ನಿರೀಕ್ಷೆಯಲ್ಲಿದ್ದ ಅವರ ಅಭಿಮಾನಿಗಳಿಗು ನಿರಾಸೆಯಾಗಿದೆ.

ದರ್ಶನ್ ಜೈಲು ಸೇರಿದ ಬಳಿಕ ಪತ್ನಿ ವಿಜಯಲಕ್ಷ್ಮಿ ಅವರು ಪ್ರತಿ ಸೋಮವಾರ ಪತಿಯನ್ನು ಭೇಟಿಯಾಗಿ, ಧೈರ್ಯ ಹೇಳುತ್ತಿದ್ದಾರೆ. ಇಂದು ಜಾಮೀನು ಅರ್ಜಿ ಮುಂದೂಡಿಕೆಯಾದ ಹಿನ್ನೆಲೆ ವಿಜಯಲಕ್ಷ್ಮಿ ಅವರು ಜೈಲಿಗೆ ಆಗಮಿಸುವ ಸಾಧ್ಯತೆಯಿದೆ. ಈ ವೇಳೆ ಮುಂದಿನ ಕಾನೂನು ಹೋರಾಟದ ಬಗ್ಗೆ ದರ್ಶನ್ ಜತೆ ಚರ್ಚಿಸುವ ಸಾಧ್ಯತೆಯಿದೆ.

ಇನ್ನು ಸೆಪ್ಟೆಂಬರ್‌ 30ರಂದು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಇಬ್ಬರ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಜನಪ್ರತಿನಿಧಿನಿಗಳ ವಿಶೇಷ ಕೋರ್ಟ್ ಮುಂದೂಡಿ ಆದೇಶ ಹೊರಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ದರ್ಶನ್ ಫ್ಯಾನ್ಸ್‌ ವಿಚಾರದಿಂದ ನನ್ನ ಹೆಂಡ್ತಿ ಸಂಬಂಧ ಹಾಳಾಗಿದೆ: ಪ್ರಥಮ್ ಆಕ್ರೋಶ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೆ ಹಾಜರಾದ ಪ್ರಕಾಶ್ ರಾಜ್

ಮತ್ತೊಂದು ಸಿನಿಮಾ ಘೋಷಿಸಿದ ರಿಷಭ್ ಶೆಟ್ಟಿ: ನೆಟ್ಟಿಗರಿಂದ ಆಕ್ಷೇಪ

ಯುವ ಪತ್ನಿ ವಿಚಾರವೆತ್ತಿದ್ದಕ್ಕೆ ರೊಚ್ಚಿಗೆದ್ದ ದೊಡ್ಮನೆ ಫ್ಯಾನ್ಸ್

ಮುಂದಿನ ಸುದ್ದಿ
Show comments