Select Your Language

Notifications

webdunia
webdunia
webdunia
webdunia

ಡಿಕೆ ಸಹೋದರರನ್ನು ಮದುವೆಗೆ ಆಹ್ವಾನಿಸಿದ ನಟ ಧನಂಜಯ್

Actor Dhananjay Marriage, DCM DK Shivkumar,  Actor Dhananjay Marriage Invitation

Sampriya

ಬೆಂಗಳೂರು , ಭಾನುವಾರ, 22 ಡಿಸೆಂಬರ್ 2024 (16:13 IST)
Photo Courtesy X
ಬೆಂಗಳೂರು: ಈಚೆಗೆ ತನ್ನ ಮದುವೆ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಮದುವೆಗೆ ಆಹ್ವಾನಿಸಿದ್ದ ನಟ ಧನಂಜಯ್ ಇಂದು ಡಿಕೆ ಸಹೋದರರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದರು.  

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ ಅವರು ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಉಪಮುಖ್ಯಮಂತಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್‌ಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.

ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದಂಪತಿಗೆ ಮದುವೆ ಆಹ್ವಾನ ನೀಡಿದ್ದಾರೆ ಡಾಲಿ. ಕೆಲ ಕಾಲ ನಟ ಸಮಯ ಕಳೆದಿದ್ದಾರೆ. ಇದೇ ವೇಳೆ, ಡಿಕೆ ಸುರೇಶ್‌ರನ್ನು ಭೇಟಿಯಾಗಿ ಮದುವೆಗೆ ಆಮಂತ್ರಿಸಿದ್ದಾರೆ.

ಈಚೆಗೆ ಡಾಕ್ಟರ್‌ ಧನ್ಯತಾ  ಜತೆ  ನಿಶ್ಚಿತಾರ್ಥ ಮಾಡಿಕೊಂಡಿದ್ದ ಧನಂಜಯ್ ಅವರು ಫೆ.16ರಂದು ಮೈಸೂರಿನಲ್ಲಿ ಮದುವೆಯಾಗುತ್ತಿದ್ದಾರೆ.

ಗುರುಹಿರಿಯರ ಸಮ್ಮುಖದಲ್ಲಿ ಈ ಜೋಡಿ ಹಸೆಮಣೆ ಏರಲಿದ್ದಾರೆ. ಈ ಮದುವೆಯಲ್ಲಿ ಸ್ಯಾಂಡಲ್‌ವುಡ್ ಕಲಾವಿದರು, ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ ಉಪ್ಪಿ ಸಿನಿಮಾ ಯುಐ: 2 ದಿನದಲ್ಲಿ ₹37 ಕೋಟಿ ಕಲೆಕ್ಷನ್