Select Your Language

Notifications

webdunia
webdunia
webdunia
webdunia

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

Dharmendra

Krishnaveni K

ಮುಂಬೈ , ಮಂಗಳವಾರ, 11 ನವೆಂಬರ್ 2025 (08:58 IST)
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ಸ್ಥಿತಿ ಗಂಭೀರವಾಗಿದೆ ಎಂದು ನಿನ್ನೆಯೇ ಮಾಹಿತಿ ಬಂದಿದ್ದವು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೆಲವು ದಿನಗಳ ಹಿಂದೆ ಅವರ ಆರೋಗ್ಯ ಕೈ ಕೊಟ್ಟಿದ್ದರಿಂದ ತಪಾಸಣೆ ನಡೆಸಿಕೊಂಡು ಹೋಗಿದ್ದರು. ಆದರೆ ಬಳಿಕ ಕೆಲವು ದಿನಗಳಲ್ಲೇ ಮತ್ತೆ ಆರೋಗ್ಯ ಉಲ್ಬಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಧರ್ಮೇಂದ್ರ ಕೇವಲ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಹೆಸರು ಮಾಡಿದ್ದರು. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಸಿಬಿ ವಿಚಾರಣೆಗೆ ಬಗ್ಗಲ್ಲ, ಏನೇ ಆದ್ರೂ ದರ್ಶನ್ ಜೊತೆಗೇ ನಿಲ್ಲುತ್ತೇನೆ ಎಂದ ಧನ್ವೀರ್