ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ

Krishnaveni K
ಮಂಗಳವಾರ, 11 ನವೆಂಬರ್ 2025 (08:58 IST)
ಮುಂಬೈ: ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರ ಸ್ಥಿತಿ ಗಂಭೀರವಾಗಿದೆ ಎಂದು ನಿನ್ನೆಯೇ ಮಾಹಿತಿ ಬಂದಿದ್ದವು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೆಲವು ದಿನಗಳ ಹಿಂದೆ ಅವರ ಆರೋಗ್ಯ ಕೈ ಕೊಟ್ಟಿದ್ದರಿಂದ ತಪಾಸಣೆ ನಡೆಸಿಕೊಂಡು ಹೋಗಿದ್ದರು. ಆದರೆ ಬಳಿಕ ಕೆಲವು ದಿನಗಳಲ್ಲೇ ಮತ್ತೆ ಆರೋಗ್ಯ ಉಲ್ಬಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಧರ್ಮೇಂದ್ರ ಕೇವಲ ನಟನಾಗಿ ಮಾತ್ರವಲ್ಲ ನಿರ್ಮಾಪಕನಾಗಿಯೂ ಹೆಸರು ಮಾಡಿದ್ದರು. ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರ ನಿಧನಕ್ಕೆ ಬಾಲಿವುಡ್ ಕಂಬನಿ ಮಿಡಿಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ 35 ವರ್ಷಗಳ ಪದ್ಧತಿ ಮುರಿದಿದ್ದ ಅಂಬರೀಶ್

ಕೊನೆಯ ದಿನದ ಚಿತ್ರೀಕರಣ ಮಗಿಸಿದ ಪುಟ್ಟಕ್ಕನ ಮಕ್ಕಳು

ಸಂಕ್ರಾಂತಿಯಂದು ನಟಿ ಅಮೂಲ್ಯ ಅಭಿನಯದ ಪೀಕೂ ಸಿನಿಮಾದ ನಟನ ಘೋಷಣೆ

ಫಿನಾಲೆಗೆ ದಿನಗಣನೆ ಶುರುವಾಗುತ್ತಿರುವ ನಟ ಧ್ರುವಂತ್‌ಗೆ ಬಿಗ್‌ ಶಾಕ್‌

ಜನ ನಾಯಗನ್ ಸೆನ್ಸಾರ್‌ ಪ್ರಮಾಣಪತ್ರ: ನಟ ವಿಜಯ್‌ಗೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments