ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ಬೆನ್ನಲ್ಳೇ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಮತ್ತೇ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಅಷ್ಟೊಂದು ಉತ್ತಮವಾಗಿಲ್ಲ ಎಂಬ ಮಾತು ಕೇಳಿಬರುತ್ತಿದೆ.
ಈ ತಿಂಗಳ ಆರಂಭದಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಹೆಲ್ತ್ ಚೆಕಪ್ ನಡೆಸಿದ್ದರು. ಇದೀಗ ಅವರನ್ನು ಮತ್ತೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯ ನಟ ಧರ್ಮೇಂದ್ರ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಹೋದ ಒಂದು ವಾರದ ನಂತರ ಮತ್ತೇ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಎಚ್‌ಟಿ ಮೂಲಗಳ ಪ್ರಕಾರ, ಧರ್ಮೇಂದ್ರ ಅವರನ್ನು ಸೋಮವಾರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ವಿವರಗಳು ಸದ್ಯಕ್ಕೆ ತಿಳಿದುಬಂದಿಲ್ಲ. ಕುಟುಂಬಸ್ಥರು ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲ.