ಬೆಂಗಳೂರು: ಕಾಂತಾರ ಸಿನಿಮಾ ದೇಶ ವಿದೇಶದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಎಲ್ಲ ಸಿನಿಮಾಗಳಲ್ಲೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಬಿಡುಗಡೆಗೂ ಮುನ್ನಾ ರಿಷಭ್ ಶೆಟ್ಟಿ ಕಾಲೆಳೆದವರಿಗೆ ದುನಿಯಾ ವಿಜಯ್ ಸಾಮಾಜಿಕ ಜಾಲತಾಣದಲ್ಲಿ ವಿಭಿನ್ನವಾಗಗಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ವಿಜಯ್ ಹಂಚಿಕೊಂಡ ಪೋಸ್ಟ್‌ನಲ್ಲಿ ಹೀಗಿದೆ: ಸೋಮವಾರದ್ ಮೇಲ್ ನೋಡ್ರೀ... ಹೆಂಗ್ ಬಿದ್ದೋಗುತ್ತೆ ಅಂದೋರಿಗೆ..
ವರ್ಷಪೂರ್ತಿ ನೋಡ್ತಾಯಿರಿ.. ನಿಮಗ್ ಕತ್ ನೋವುತ್ತೇ ಹೊರತು ಬಿದ್ದೋಗಲ್ಲ... ಎಂದು ಸಾರಿ.. ಮತ್ತೆ ಇಡೀ ದೇಶ ಹೆಮ್ಮ ಪಡುವಂತಹ ಯಶಸ್ವಿ ಚಿತ್ರ ಕೊಟ್ಟ ರಿಷಬ್ ಶೆಟ್ಟಿಯವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
ರಿಷಭ್ ಶೆಟ್ಟಿ ನಿರ್ದೇಶನ ಹಾಗೂ ನಟನೆಗೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ರಿಷಭ್ ಅವರ ಕೆಲಸಕ್ಕೆ ನೋಡುಗರು ಶ್ಲಾಘಿಸುತ್ತಿದ್ದಾರೆ.