Webdunia - Bharat's app for daily news and videos

Install App

ನಟ, ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ವಿಧಿವಶ

Krishnaveni K
ಗುರುವಾರ, 29 ಫೆಬ್ರವರಿ 2024 (16:07 IST)
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ಮಾಜಿ ಐಎಎಸ್ ಅಧಿಕಾರಿ ಕೆ. ಶಿವರಾಮ್ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಅವರಿಗೆ 71 ವರ್ಷವಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿದ್ದ ಶಿವರಾಮ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.  ಇದೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಕಳೆದ 20 ದಿನಗಳಿಂದ ಅವರು ಆಸ್ಪತ್ರೆಯಲ್ಲಿದ್ದರು. ಆದರೆ ಮೊನ್ನೆ ಅವರಿಗೆ ಹೃದಯಾಘಾತವೂ ಆಗಿತ್ತು. ಜೊತೆಗೆ ಮೆದುಳು ನಿಷ್ಕ್ರಿಯಗೊಂಡಿತ್ತು. ಕಿಡ್ನಿ ವೈಫಲ್ಯಕ್ಕೀಡಾಗಿದ್ದರು. ಇದೀಗ ಕೊನೆಯುಸಿರಳೆದಿದ್ದಾರೆ ಎಂದು ಅವರ ಆಪ್ತರಿಂದ ತಿಳಿದುಬಂದಿದೆ.

ನಟನಾಗಿ ಮಾತ್ರವಲ್ಲದೆ, ಅಧಿಕಾರಿಯಾಗಿ, ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದರು. ಕನ್ನಡದಲ್ಲೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಹೆಗ್ಗಳಿಕೆ ಅವರದ್ದಾಗಿತ್ತು. ಬಳಿಕ ನಟನೆಯಲ್ಲಿ ಆಸಕ್ತಿ ಇದ್ದಿದ್ದರಿಂದ ಸರ್ಕಾರೀ ಕೆಲಸಕ್ಕೆ ರಾಜೀನಾಮೆ ನೀಡಿ ಸಿನಿಮಾದತ್ತ ಹೊರಳಿದ್ದರು.

ಬಾನಲ್ಲೇ ಮಧುಚಂದ್ರಕೆ, ವಸಂತ ಕಾವ್ಯ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದರು. ಬಳಿಕ ರಾಜಕೀಯಕ್ಕೂ ಸೇರ್ಪಡೆಯಾಗಿದ್ದರು. ಬಿಜೆಪಿ ಪಕ್ಷಕ್ಕಾಗಿ ಕೆಲವು ಸಮಯ ದುಡಿದರು.  ಇದೀಗ ಅವರಿಲ್ಲ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು, ಕುಟುಂಬಸ್ಥರು, ಸಿನಿ ಸ್ನೇಹಿತರು ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments