Publish Date: Tue, 04 Dec 2018 (07:11 IST)
Updated Date: Tue, 04 Dec 2018 (07:13 IST)
ಬೆಂಗಳೂರು : ರಾಜಾಹುಲಿ ಚಿತ್ರದಲ್ಲಿ ಯಶ್ ಕುಚುಕು ಗೆಳೆಯನಾಗಿ ನಟಿಸಿದ ನಟ ಹರ್ಷವರ್ಧನ್ ಅವರು ಸೋಮವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನಟ ಹರ್ಷವರ್ಧನ್ ಅವರು ಇದೇ ವರ್ಷ ಮೇ ತಿಂಗಳಲ್ಲಿ ಚಿಕ್ಕಮಗಳೂರಿನಲ್ಲಿ ಕುಟುಂಬ ಸದಸ್ಯರು ಹಾಗೂ ಆಪ್ತರ ಸಮ್ಮುಖದಲ್ಲಿ ಮಾಡೆಲ್ ಐಶ್ವರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಇದೀಗ ಡಿ. 3 ರಂದು ನಟ ಹರ್ಷವರ್ಧನ್ ಹಾಗೂ ಮಾಡೆಲ್ ಐಶ್ವರ್ಯ ತಿರುಪತಿಯಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಇದೇ ತಿಂಗಳ 8ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
‘ಮೊಗ್ಗಿನ ಮನಸ್ಸು’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ನಟ ಹರ್ಷವರ್ಧನ ಅವರು ‘ರಾಜಹುಲಿ’, ‘ಗಜಪಡೆ’, ‘ಪವರ್’, ‘ರಘುವೀರ’ ಸಿನಿಮಾದಲ್ಲಿ ನಟಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.